ಕರ್ನಾಟಕ

ಮಾಲಾಶ್ರೀ ಕಾಂಗ್ರೆಸ್‌ಗೆ?

Pinterest LinkedIn Tumblr

Malashree

ಸದಾಶಿವನಗರಲ್ಲಿರುವ ಸಚಿವ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ನಟಿ ಮಾಲಾಶ್ರೀ

ಬೆಂಗಳೂರು: ಕನ್ನಡದ ಪ್ರಸಿದ್ಧ ತಾರೆ ಮಾಲಾಶ್ರೀ ಅವರು ಸದ್ಯದಲ್ಲೇ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಮಲಾಶ್ರೀ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಶಿವಕುಮಾರ್‌ ಅವರು, ಹೆಬ್ಬಾಳ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಕೋರಿದರು. ಅದಕ್ಕೆ ಮಾಲಾಶ್ರೀ ಅವರು ಸಮ್ಮತಿ ಸೂಚಿಸಿದ್ದು ಪ್ರಚಾರ ನಡೆಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಪ್ರಚಾರದ ಸಂದರ್ಭದಲ್ಲೇ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Write A Comment