ಕರ್ನಾಟಕ

ಬೆಂಗಳೂರು ಅಭಿವೃದ್ಧಿ ರಾಜಕೀಯ ಬೇಡ: ಡಿವಿಎಸ್ ಮನವಿ

Pinterest LinkedIn Tumblr

UNION MINISTER SADANAD GOWAD INSPECTTING RAJAJINAGAR IST WORKS GOPLAIYAPABANABAREEDY AND OTHERS ARE SEEN

ಬೆಂಗಳೂರು, ಫೆ. ೨೦- ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಬೇಡ ಎಂದು ಕೇಂದ್ರದ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.

ಕೇಂದ್ರ ಸರ್ಕಾರ ಬೆಂಗಳೂರು ನಗರದ ಅಭಿವೃದ್ಧಿಗಾಗಿ 173 ಕೋಟಿ ರೂ.ಗಳನ್ನು ಬಿಬಿಎಂಪಿಗೆ ಬಿ‌ಡುಗಡೆ ಮಾಡಿದೆ. ರಾಜ್ಯ ಸರ್ಕಾರ ಕೇಂದ್ರಕ್ಕಿಂತ ಹೆಚ್ಚಿನ ಹಣ ನೀಡಿ ಬೆಂಗಳೂರು ಅಭಿವೃದ್ಧಿಗೆ ದೊಡ್ಡ ಮನಸ್ಸು ಮಾಡಬೇಕು ಎಂದರು.

ರಾಜಾಜಿನಗರದ ಮೊದಲನೇ ಹಂತದಲ್ಲಿ ಬಿಬಿಎಂಪಿ ನಿರ್ಮಿಸುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಗ್ಗೆ ಟೀಕೆ ಮಾಡುವುದಿಲ್ಲ. ಆದರೆ, ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಬೇಕು. ಬೆಂಗಳೂರಿನ ಅಭಿವೃದ್ಧಿ ನಮ್ಮೆಲ್ಲರ ಕರ್ತವ್ಯ ಎಂದರು.

ಬಿಜೆಪಿಗೆ ಗೆಲುವು

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಬಿಜೆಪಿ 15 ಜಿಲ್ಲಾ ಪಂಚಾಯ್ತಿಗಳಲ್ಲಿ ಅಧಿಕಾರ ಹಿಡಿಯಲಿದೆ ಎಂದು ಅವರು ಹೇಳಿದರು.

ಸ್ಥಳೀಯರ ವಿರೋಧ

ಕೇಂದ್ರ ಸಚಿವ ಸದಾನಂದಗೌಡ ಮೇಲ್ಸೇತುವೆ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಉದ್ಯಾನವನದ ಜಾಗವನ್ನು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಬಳಸುತ್ತಿರುವ ಬಿಬಿಎಂಪಿ ಕ್ರಮಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಘೇರಾವ್ ಸಹ ಹಾಕಿದರು.

ಸರ್ವಿಸ್ ರಸ್ತೆ ನಿರ್ಮಾಣ ಮಾಡುವುದರಿಂದ ಮರಗಳ ಮಾರಣಹೋಮ ಆಗುತ್ತದೆ. ಈ ಬಗ್ಗೆ ಎಚ್ಚರ ವಹಿಸಿ ಎಂದು ಸ್ಥಳೀಯರು ಸದಾನಂದಗೌಡರಿಗೆ ಮನವಿ ಸಹ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆ ಸ್ಥಳೀಯರು ವಾಗ್ವಾದ ಸಹ ನಡೆಸಿದರು.

ಸ್ಥಳೀಯರ ಮನವಿಯನ್ನು ಆಲಿಸಿದ ಕೇಂದ್ರ ಸಚಿವ ಸದಾನಂದಗೌಡರವರು ಉದ್ಯಾನವನ ಉಳಿಸಿಕೊಂಡು ಸರ್ವಿಸ್ ರಸ್ತೆ ನಿರ್ಮಿಸುವ ಭರವಸೆಯನ್ನು ನೀಡಿದರು.

ಉದ್ಯಾನವನಕ್ಕೆ ಆಗಮಿಸುವ ಹಿರಿಯ ನಾಗರಿಕರಿಗೆ ಸ್ಕೈವಾಕ್ ನಿರ್ಮಿಸುವ ಭರವಸೆಯನ್ನು ಅವರು ನೀಡಿದರು.

Write A Comment