ಕರ್ನಾಟಕ

ಆರ್ಟ್ ಆಫ್ ಲಿವಿಂಗ್​ನಲ್ಲಿ ಗ್ರಾಮ ದೇವತೆಗಳ ಜಾತ್ರೆ

Pinterest LinkedIn Tumblr

artಬೆಂಗಳೂರು: ಆರ್ಟ್ ಆಫ್ ಲಿವಿಂಗ್ ನವದೆಹಲಿಯಲ್ಲಿ ಮಾ.11ರಿಂದ 13ರವರೆಗೆ ಏರ್ಪಡಿಸಿರುವ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಎಲ್ಲ ಗ್ರಾಮದೇವತೆಗಳ ಉತ್ಸವ ಮೂರ್ತಿಗಳ ಜಾತ್ರೆ ಏರ್ಪಡಿಸಲಾಗಿತ್ತು.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಗ್ರಾಮದೇವತೆಗಳ ಉತ್ಸವ ಮೂರ್ತಿಗಳನ್ನು ಕನಕಪುರ ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ಕೇಂದ್ರಕ್ಕೆ ತರಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಗ್ರಾಮದೇವತೆಗಳಿಗೆ ಪೂಜಾ ಕೈಂಕರ್ಯ ನೆರವೇರಿಸಿದರು.

ಆರ್ಟ್ ಆಫ್ ಲಿವಿಂಗ್ ಸ್ಥಾಪನೆಗೊಂಡು 35 ವರ್ಷಗಳು ಪೂರ್ಣಗೊಂಡಿವೆ. ಈ ಸಂಭ್ರಮಾಚರಣೆಗಾಗಿ ದೆಹಲಿಯಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ ಏರ್ಪಡಿಸಲಾಗಿದೆ. ಇದೇ ಮೊದಲ ಬಾರಿಗೆ 155 ದೇಶಗಳ 3.5 ದಶಲಕ್ಷ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ಸಾವಿರ ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ 7 ಎಕರೆ ವಿಶಾಲವಾದ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ.

Write A Comment