ಕರ್ನಾಟಕ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಕೆ.ಮುಖರ್ಜಿ ಪ್ರಮಾಣ

Pinterest LinkedIn Tumblr

skmukharjiಬೆಂಗಳೂರು: ಕಳೆದ 10 ತಿಂಗಳಿಂದ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಮಂಗಳವಾರ ಸಂಜೆ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖರ್ಜಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಎಸ್.ಕೆ. ಮುಖರ್ಜಿ ಅವರು 2015ರ ಏಪ್ರಿಲ್ 15ರಂದು ಕೋಲ್ಕತಾ ಹೈಕೋರ್ಟ್ ನಿಂದ ಕರ್ನಾಟಕ ಹೈಕೋರ್ಟ್ ಗೆ ವರ್ಗಾವಣೆಗೊಂಡಿದ್ದರು. ಜೂನ್ 1ರಿಂದ ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

Write A Comment