ಕರ್ನಾಟಕ

ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲಿದ್ದಾರೆ ಗೀತಾ ಶಿವರಾಜ್ ಕುಮಾರ್

Pinterest LinkedIn Tumblr

shivanna

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ .ಬಂಗಾರಪ್ಪ ನವರ ಪುತ್ರಿ ಹಾಗೂ ನಟ ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಗೀತಾ ಶಿವರಾಜ್‌ಕುಮಾರ್‌ ಕಾರಣಾಂತರದಿಂದ ರಾಜಕೀಯದಿಂದ ದೂರವಾಗಿದ್ದರು.

ಶಿವಮೊಗ್ಗದಲ್ಲಿ ಮಾತನಾಡಿದ ಶಿವರಾಜ್ ಕುಮಾರ್ ತಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೆ, ಗೀತಾ ಅವರು ರಾಜಕಾರಣದಲ್ಲಿ ಸಕ್ರಿಯವಾಗಿ ಮುಂದುವರಿಯಲು ಸ್ವತಂತ್ರರಾಗಿದ್ದಾರೆ. ಅವರ ಆಸೆಯಂತೆಯೇ ರಾಜಕಾರಣದಲ್ಲಿ ಸೇವೆ ಮಾಡಲಿದ್ದಾರೆ. ಶಿವಮೊಗ್ಗವನ್ನು ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಚುನಾವಣೆ ನಂತರ ತಮ್ಮ ಆರೋಗ್ಯ ಮತ್ತು ಮಗಳ ಮದುವೆ ಮೊದಲಾದ ಕಾರಣಗಳಿಂದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿರಲು ಗೀತಾಗೆ ಸಾಧ್ಯವಾಗಿರಲಿಲ್ಲ. ಇನ್ನು ಮುಂದೆ ಸಕ್ರಿಯವಾಗಿರುತ್ತಾರೆ. ಅನುಮಾನ ಬೇಡ ಎಂದು ಹೇಳಿದರು.

Write A Comment