ಕರ್ನಾಟಕ

ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Pinterest LinkedIn Tumblr

sidd-e1456376899399ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬಿದ್ದಿದ್ದು, ರಾಜ್ಯದ ಬಜೆಟ್ ಅಧಿವೇಶನದ ಬಳಿಕ ಸಂಪುಟ ವಿಸ್ತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎನ್ನುವ ವಿಚಾರ ನನಗೆ ತಿಳಿದಿಲ್ಲ. ಕಾಂಗ್ರೆಸ್ ಪಕ್ಷ ಅಂತಹ ಮೈತ್ರಿಯ ಬಗ್ಗೆ ಕೆದಕುವ ಗೋಜಿಗೆ ಹೋಗುವುದಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಯಾವ ವಿಚಾರಕ್ಕಾಗಿ ದೆಹಲಿಗೆ ತೆರಳಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ದೆಹಲಿಗೆ ಹೋಗುವಾಗ ನಮ್ಮನ್ನು ಕೇಳಿಯೇ ಹೋಗಬೇಕು ಎನ್ನುವ ನಿಯಮಗಳಿಲ್ಲ. ನಾನು ಕೂಡಾ ಶೀಘ್ರದಲ್ಲಿ ದೆಹಲಿಗೆ ತೆರಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Write A Comment