ಕರ್ನಾಟಕ

2018 ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರ ಕೈಬಿಡಲಿದ್ದಾರೆ ಸಿಎಂ ಸಿದ್ದರಾಮಯ್ಯ !

Pinterest LinkedIn Tumblr

siddu-fanal

ಮೈಸೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ತವರೂರು ಮೈಸೂರಿನಲ್ಲಿ ಸೋಲು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ.

1983-2006 ರ ವರೆಗೂ ವರುಣ ಕ್ಷೇತ್ರವನ್ನು ಪ್ರತಿನಿಧಿನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹಿಂದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ನಂತರ ವರುಣ ಕ್ಷೇತ್ರದಲ್ಲಿ ತಮ್ಮ ಮಗನನ್ನು ನಿಲ್ಲಿಸಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಲು ಆರಂಭಿಸಿದ್ದರು. ಇದರಂತೆ ಈ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಹಳ್ಳಿಯ ಜನರಿಗೆ ಕಾವೇರಿ ಕುಡಿಯುವ ನೀರು ಯೋಜನೆಯನ್ನು ಜಾರಿ ಮಾಡಿದ್ದರು.

ಇದೀಗ ಇತ್ತೀಚೆಗೆ ನಡೆದ ಚುನಾವಣೆ ಮುಖ್ಯಮಂತ್ರಿಯವರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಜೆಡಿಎಸ್ 8 ರಲ್ಲಿ 6 ಸ್ಥಾನಗಳನ್ನು ಹಾಗೂ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ 98ರಲ್ಲಿ 19 ಸ್ಥಾನಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿತ್ತು. ಕಾಂಗ್ರೆಸ್ 13 ಸ್ಥಾನಗಳನ್ನು ಪಡೆಯುವಲ್ಲಿ ಸಫಲವಾಗಿತ್ತು.

Write A Comment