ಕರ್ನಾಟಕ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಕೊಠಡಿಯೊಳಗೆ ವಾಚ್ ಕಟ್ಟುವಂತಿಲ್ಲ

Pinterest LinkedIn Tumblr

exame

ಬೆಂಗಳೂರು: ಮಾರ್ಚ್ 11ರಿಂದ ಆರಂಭಗೊಳ್ಳವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೈಗಡಿಯಾರ ಕಟ್ಟಿಕೊಂಡು ಬರುವುದಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಇದೆ.

ಪೂರ್ವ ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿಯೊಂದು ಕೊಠಡಿಯಲ್ಲಿ ಗೋಡೆ ಗಡಿಯಾರವನ್ನು ಇರಿಸಲಾಗುವುದು. ಹಾಗಾಗಿ, ವಿದ್ಯಾರ್ಥಿಗಳು ಧರಿಸುವ ಕೈಗಡಿಯಾರಕ್ಕೆ ನಿರ್ಬಂಧ ಹೇರುವ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಕೈಗಡಿಯಾರಗಳಲ್ಲಿ ಕ್ಯಾಲ್ಕುಲೇಟರ್ ಅಳವಡಿಕೆಯಿದ್ದು, ಇದನ್ನು ವಿದ್ಯಾರ್ಥಿಗಳು ದುರಪಯೋಗ ಪಡಿಸಿಕೊಳ್ಳಬಹುದು ಎಂಬು ಉದ್ದೇಶದಿಂದ ಕೈಗಡಿಯಾರ ನಿರ್ಬಂಧ ಹೇರಲು ಚಿಂತನೆ ನಡೆಸಲಾಗಿದೆ. ಆದರೆ, ಈ ಬಗ್ಗೆ ಇನ್ನು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ.

Write A Comment