ಕರ್ನಾಟಕ

ರಾಷ್ಟ್ರ ರಾಜಕಾರಣಕ್ಕಿಂತ ರಾಜ್ಯರಾಜಕಾರಣವೇ ಇಷ್ಟ: ಬಿ.ಎಸ್.ಯಡಿಯೂರಪ್ಪ

Pinterest LinkedIn Tumblr

yaddiಬೆಳಗಾವಿ, ಫೆ.27- ನಾನೆಂದೂ ರಾಷ್ಟ್ರ ರಾಜಕಾರಣದತ್ತ ಚಿತ್ತ ಹರಿಸಿಲ್ಲ. ನನ್ನದೇನಿದ್ದರೂ ಕರ್ನಾಟಕವೇ ನನ್ನ ನೆಲೆ. ರಾಜ್ಯ ರಾಜಕಾರಣದಲ್ಲಿ ನನ್ನ ಆಸಕ್ತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಶೇ.70ರಷ್ಟು ಅಭಿಮಾನಿಗಳು ರಾಜ್ಯ ರಾಜಕಾರಣದಲ್ಲೇ ಇರಬೇಕು ಎಂದು ಬಯಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತ ಸಿದ್ಧ. ಅದಕ್ಕಾಗಿ ನಾನು ಪಣ ತೊಟ್ಟು ಶ್ರಮಿಸುತ್ತೇನೆ ಎಂದು ಹೇಳಿದರು.

ನನ್ನ ಜನ್ಮ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ವಿನೂತನ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತರುತ್ತಿರುವುದು ನನಗೆ ಅತೀವ ಸಂತಸ ತಂದಿದೆ ಎಂದು ಹೇಳಿದರು. ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಲಭಿಸಿವೆ. ಕಾಂಗ್ರೆಸ್‌ನ್ನು ಜನತೆ ತಿರಸ್ಕರಿಸಿದ್ದಾರೆ. ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆದು ನಾವು ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಒಗ್ಗಟ್ಟಿನಿಂದ 7 ಜಿಲ್ಲೆಗಳಲ್ಲಿ ಸ್ವಂತ ಬಲದ ಮೇಲೆ ಇನ್ನು ನಾಲ್ಕೈದು ಜಿಲ್ಲೆಗಳಲ್ಲಿ ಪಕ್ಷೇತರರು ಹಾಗೂ ಸಮಾನ ಮನಸ್ಕರ ಜತೆಗೂಡಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತ ಸಿದ್ಧ ಎಂದು ಹೇಳಿದರು.

ನನ್ನ ಹುಟ್ಟುಹಬ್ಬಕ್ಕೆ ಹಲವರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಆದರೆ ನಾನು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೂ ರೈತರು, ಕಾರ್ಮಿಕರು ಸಕಲ ಜನತೆ ನೆಮ್ಮದಿಯಿಂದ ಬದುಕುವಂತಹ ರಾಜ ನಿರ್ಮಾಣದ ಕನಸು ಕಾಣುತ್ತಿದ್ದೇನೆ. ದೇವರಲ್ಲೂ ಬೇಡಿಕೊಳ್ಳುತ್ತೇನೆ ಎಂದರು. ಬೆಳಗಾವಿಯ ಕೆಎಲ್‌ಇ ಗೆಸ್ಟ್‌ಹೌಸ್‌ನಲ್ಲಿ ಕೆಲ ಶಾಸಕರು, ಬಿಜೆಪಿ ಮುಖಂಡರು ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಿದರು.

Write A Comment