ಕರ್ನಾಟಕ

74ನೇ ಜನ್ಮ ದಿನ ಆಚರಿಸಿಕೊಂಡ ಯಡಿಯೂರಪ್ಪ

Pinterest LinkedIn Tumblr

yaddiಬೆಳಗಾವಿ: ಕೇಕ್ ಕತ್ತರಿಸುವುದರ ಮೂಲಕ ತಮ್ಮ 74ನೇ ಜನ್ಮ ದಿನಾಚರಣೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಜನ್ಮ ದಿನಾಚರಣೆಯ ದಿನವೇ ಪ್ರಧಾನಿ ಮೋದಿ ಅವರು ರೈತರಿಗಾಗಿ ಫಸಲ್ ಬಿಮಾ ಯೋಜನೆಯನ್ನು ರಾಜ್ಯದಲ್ಲಿ ಉದ್ಘಾಟನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ, ತೀವ್ರ ಕುಡಿಯುವ ನೀರಿನ ಸಮಸ್ಯೆ ಇದ್ದರೂ, ಕಳಸಾ ಬಂಡೂರಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ತುಟಿ ಬಿಚ್ಚಿ ಮಾತನಾಡುತ್ತಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂದರು. ಬೆಳಗಾವಿಯಲ್ಲಿ ಫಸಲ್ ಬಿಮಾ ಯೋಜನೆ ಲೋಕಾರ್ಪಣೆಯಾಗುವುದರಿಂದ ಈ ಭಾಗದ ರೈತರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಹೇಳಿದರು. ಮಾಜಿ ಸಚಿವ ಉಮೇಶ ಕತ್ತಿ, ಕರ್ನಾಟಕ ಉಸ್ತುವಾರಿ ವಹಿಸಿರುವ ಮುರಳಿಧರ ರಾವ್, ಶಾಸಕ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮತ್ತಿತರರು ಇದ್ದರು.

Write A Comment