ಕರ್ನಾಟಕ

ರೈತರಿಗೆ ನೆರವು ಸರ್ಕಾರದ ಕ್ರಮ:ವಾಲಾ ಶ್ಲಾಘನೆ

Pinterest LinkedIn Tumblr

valaಬೆಂಗಳೂರು: ಸಾಲದ ಸುಳಿಗೆ ಸಿಕ್ಕಿರುವ ರೈತರು ಆತ್ಮಹತ್ಯೆಯಂತಹ ಅತಿರೇಕದ ನಿರ್ಧಾರ ಕೈಗೊಳ್ಳುವುದರಿಂದ ಅವರ ಕುಟುಂಬದವರು ಎದುರಿಸುವ ಸಂಕಷ್ಟ ಮತ್ತು ಯಾತನೆಯನ್ನು ನಿವಾರಿಸಲು ಸರ್ಕಾರ ಮುಂದಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.

ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದ ಅವರು, ಮೃತ ರೈತರ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತವನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ರೈತರ ವಿಧವಾ ಪತ್ನಿಯರಿಗೆ ನೀಡುವ ಮಾಸಿಕ ಪಿಂಚಣಿಯನ್ನು 500 ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. ಅವರ ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೂ ಉಚಿತ ಶಿಕ್ಷಣ ನೀಡುವುದಾಗಿ ಘೋಷಿಸಲಾಗಿದೆ ಎಂದು ಅವರು ಹೇಳಿದರು.

ರೈತರಿಗೆ ಅಗತ್ಯ ಸಾಲ ಸೌಲಭ್ಯವನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ಈ ವರ್ಷದ ಜನವರಿ ಅಂತ್ಯಕ್ಕೆ 16 ಲಕ್ಷ ರೈತರಿಗೆ 7800 ಕೋಟಿ ರೂ. ಕೃಷಿ ಸಾಲವನ್ನು ವಿತರಣೆ ಮಾಡಲಾಗಿದೆ. ಸಹಕಾರಿ ಸಂಘಗಳಿಗೆ 360 ಕೋಟಿ ರೂ.ಗಳಷ್ಟು ಬಡ್ಡಿ ರಿಯಾಯ್ತಿ ಬಿಡುಗಡೆ ಮಾಡಿದ್ದು, ಇದರಿಂದ 9 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ರಾಜ್ಯಪಾಲರು ಹೇಳಿದರು.

ತೀವ್ರ ಬರಗಾಲದ ಪರಿಸ್ಥಿತಿಯ ಕಾರಣದಿಂದ ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ರೈತರ ಮೇಲಿನ ಹೊರೆಯನ್ನು ತಗ್ಗಿಸಲು ಸರ್ಕಾರ ಮುಂದಾಗಿದೆ ಎಂದರು.

ಮುಂಗಾರು ಅವಧಿಯಲ್ಲಿ ರಾಜ್ಯದ 136 ತಾಲ್ಲೂಕುಗಳಲ್ಲಿ ಹಾಗೂ ಹಿಂಗಾರು ಅವಧಿಯಲ್ಲಿ 62 ತಾಲ್ಲೂಕುಗಳಲ್ಲಿ ತೀವ್ರ ಬರಪರಿಸ್ಥಿತಿ ಇದ್ದರೂ ಸರ್ಕಾರ 110 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯ ಉತ್ಪಾದನೆಯನ್ನು ಸಾಧಿಸುವ ಗುರಿ ಹೊಂದಿದೆ. ರೈತರಿಗೆ ತಂತ್ರಜ್ಞಾನವನ್ನು ತಲುಪಿಸಲು ಸೇವಾ ಸಂಸ್ಥೆಗಳ ಸೇವೆ ಬಳಸಿಕೊಳ್ಳಲಾಗುತ್ತಿದೆ. ರೈತರ ಹೊಲಗಳಿಗೆ ನವೀನ ವಿಧಾನಗಳನ್ನು ಪರಿಚಯಿಸುವ ಮೂಲಕ ಅವರ ಜೀವನೋಪಾಯಗಳನ್ನು ಉತ್ತಮಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸ್ ಬಲವನ್ನು ಸಶಕ್ತಗೊಳಿಸಲು ಮತ್ತು ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ 9 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. 15 ಹೊಸ ಪೊಲೀಸ್ ಠಾಣೆ, 10 ಮಹಿಳಾ ಪೊಲೀಸ್ ಠಾಣೆ, ಮತ್ತು 2 ಪೊಲೀಸ್ ಉಪವಿಭಾಗಗಳನ್ನು ತೆರೆಯಲು ಮಂಜೂರಾತಿ ನೀಡಲಾಗಿದೆ ಎಂದು ಅವರು ಹೇಳಿದರು.

ನೀರಾವರಿ ಸಾಮರ್ಥ್ಯವನ್ನು ಹೆಚ್ಚಿಸಲು ಕಳೆದ ಡಿಸೆಂಬರ್ ಅಂತ್ಯದವರೆಗೆ 52,770 ಎಕರೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ವಿವಿಧ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಜುಭಾಯಿವಾಲಾ ಹೇಳಿದರು.
ವಿದ್ಯುತ್ ಸಮಸ್ಯೆ ಬಗೆಹರಿಸಲು ಸಾಂಪ್ರದಾಯಿಕ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ವಿದ್ಯುತ್ ಶಕ್ತಿ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸೌರ ವಿದ್ಯುತ್ ಉತ್ಪಾದನೆಗೆ ಉತ್ತೇಜನ ನೀಡಲು ಈಗಾಗಲೇ 1 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ವಿವಿಧ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಈಗಾಗಲೇ 124 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಯೋಜನೆಗಳು ಕಾರ್ಯಾರಂಭ ಮಾಡಿವೆ ಎಂದರು.
ಭರವಸೆ
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಭರವಸೆ ನೀಡಿದರು.

ಪೊಲೀಸ್ ಬಲವನ್ನು ಸಶಕ್ತಗೊಳಿಸಲು ಮತ್ತು ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ 9 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. 15 ಹೊಸ ಪೊಲೀಸ್ ಠಾಣೆ, 10 ಮಹಿಳಾ ಪೊಲೀಸ್ ಠಾಣೆ, ಮತ್ತು 2 ಪೊಲೀಸ್ ಉಪವಿಭಾಗಗಳನ್ನು ತೆರೆಯಲು ಮಂಜೂರಾತಿ ನೀಡಲಾಗಿದೆ ಎಂದು ಅವರು ಹೇಳಿದರು.

ನೀರಾವರಿ ಸಾಮರ್ಥ್ಯವನ್ನು ಹೆಚ್ಚಿಸಲು ಕಳೆದ ಡಿಸೆಂಬರ್ ಅಂತ್ಯದವರೆಗೆ 52,770 ಎಕರೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ವಿವಿಧ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಜುಭಾಯಿ ವಾಲಾ ಹೇಳಿದರು.

ಅನ್ನಭಾಗ್ಯ ಯೋಜನೆ
ರಾಜ್ಯದಲ್ಲಿ ಒಂದು ಕೋಟಿಗಿಂತಲೂ ಹೆಚ್ಚಿನ ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದು, ಈ ಕುಟುಂಬಗಳಿಗೆ ಒಂದು ಲೀಟರ್ ತಾಳೆ ಎಣ್ಣೆಯನ್ನು 25 ರೂ.ಗಳ ಅಗ್ಗದ ದರದಲ್ಲಿ ಮತ್ತು 1 ಕೆ.ಜಿ. ಅಯೋಡಿನ್ ಉಪ್ಪನ್ನು 2 ರೂ. ದರದಲ್ಲಿ ಒದಗಿಸಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದು, ಕ್ಷೀರಭಾಗ್ಯ ಯೋಜನೆಯಡಿ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿರುವ 38 ಲಕ್ಷ ಮಕ್ಕಳಿಗೆ ಮತ್ತು 61 ಲಕ್ಷ ಶಾಲಾ ಮಕ್ಕಳಿಗೆ ಹಾಲನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೈಕಲ್ ಮತ್ತು ಉಚಿತವಾಗಿ ಪಠ್ಯ ಪುಸ್ತಕಗಳನ್ನು ಒದಗಿಸಲಾಗಿದೆ. ವರ್ಷಕ್ಕೆ ಒಂದು ಜತೆ ಶೂ, ಎರಡು ಜತೆ ಸಾಕ್ಸ್‌ಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಪರಿಷ್ಕೃತ ಜವಳಿ ನೀತಿ ಯೋಜನೆಯಡಿ 2018ರ ವೇಳೆಗೆ 8 ಸಾವಿರ ಕೋಟಿ ರೂ. ಬಂಡವಾಳವನ್ನು ಆಕರ್ಷಿಸಿ ಸುಮಾರು 4 ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಕೈಗಾರಿಕೆ ಅಭಿವೃದ್ಧಿಗಾಗಿ ವಿಷನ್‌ಗ್ರೂಪ್ ರಚಿಸಲಾಗಿದೆ ಎಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಜಾಗತೀಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್‌ವೆಸ್ಟ್ ಕರ್ನಾಟಕದಿಂದ 3 ಲಕ್ಷ ಕೋಟಿ ರೂ. ಗಳಷ್ಟು ಬಂಡವಾಳ ಆಕರ್ಷಿಸಲಾಗಿದೆ. ಈಗಾಗಲೇ 1.77 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆಯೊಂದಿಗೆ 1080 ಯೋಜನೆಗಳು ಅನುಮೋದನೆ ಪಡೆದಿವೆ. ಈ ಯೋಜನೆಗಳಿಂದ ಸುಮಾರು 5 ಲಕ್ಷ ಜನರಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ ಎಂದರು.

Write A Comment