ಕರ್ನಾಟಕ

ವಿಧಾನಸಭೆಯಲ್ಲಿ ಬಿಜೆಪಿ ಧರಣಿ

Pinterest LinkedIn Tumblr

vidhana_soudha_default (1)ಬೆಂಗಳೂರು, ಮಾ. ೧- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದುಬಾರಿ ವಾಚ್ ಧರಿಸಿರುವ ವಿವಾದದ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಲು ನಿರಾಕರಿಸಿದ್ದ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ತೀರ್ಮಾನದಿಂದ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿಂದು ಧರಣಿ ನಡೆಸಿದರು.

ಈ ವಿಚಾರ ನಿಲುವಳಿ ಸೂಚನೆಯಡಿ ಚರ್ಚೆಗೆ ಬರಲ್ಲ. ಬೇರೆ ರೂಪದಲ್ಲಿ ಪ್ರಸ್ತಾಪ ಮಾಡಿ ಎಂದು ಕಾಗೋಡು ತಿಮ್ಮಪ್ಪ ಅವರು ಹೇಳಿದಾಗ, ಅದಕ್ಕೆ ಒಪ್ಪದ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು.

ಈ ಹಂತದಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ಇದಕ್ಕೂ ಮುನ್ನ ಮಾತನಾಡಿದ ವಿರೋಧ ಪಕ್ಷದ ನಾಯಕ ಜಗದೀಶ್‌ಶೆಟ್ಟರ್, ಇದೊಂದು ಸಾರ್ವಜನಿಕ ಮಹತ್ವದ ವಿಚಾರವಾಗಿರುವುದರಿಂದ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದಿದ್ದರು.

ಶೆಟ್ಟರ್ ಅವರ ಬೆಂಬಲಕ್ಕೆ ಬಿಜೆಪಿ ಸದಸ್ಯರೆಲ್ಲಾ ನಿಂತು, ನಿಲುವಳಿ ಸೂಚನೆಯಡಿ ಅವಕಾಶ ಕೊಡಲು ಸಾಧ್ಯವಾಗದಿದ್ದರೆ ನಿಯಮ 69 ರಡಿಯಾದರೂ ಚರ್ಚೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

Write A Comment