ಕರ್ನಾಟಕ

ಸ್ಪೈಸ್ ಜೆಟ್ ವಿಮಾನದ ಟೈರ್ ಸ್ಫೋಟ: ತುರ್ತು ಭೂಸ್ಪರ್ಶ

Pinterest LinkedIn Tumblr

SPICEJET

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕೊತಾಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಟಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.

ಬೆಂಗಳೂರು ನಿಲ್ದಾಣದಿಂದ ಕೊಲ್ಕೋತಾಗೆ ವಿಮಾನ ತೆರಳುತ್ತಿತ್ತು. ಮಾರ್ಗಮಧ್ಯದಲ್ಲಿ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿದ್ದು, ಪೈಲಟ್ ಕೋಲ್ಕೊತಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಲ್ಯಾಂಡ್‌ ಮಾಡಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.

ಎಸ್ ಜಿ 517 ವಿಮಾನ ಬೆಂಗಳೂರಿನಿಂದ ಕೊಲ್ಕೊತ್ತಾಗೆ ತೆರಳುತ್ತಿತ್ತು. ಭಾರಿ ದುರಂತವೊಂದು ತಪ್ಪಿದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

Write A Comment