ಕರ್ನಾಟಕ

ವಾಚ್ ಪ್ರಕರಣದಲ್ಲಿ ನನ್ನಿಂದ ತಪ್ಪಾಗಿಲ್ಲ, ಧೈರ್ಯವಾಗಿ ಮಾತಾಡಿ: ಸಿಎಂ

Pinterest LinkedIn Tumblr

160301kpn92ಬೆಂಗಳೂರು: ವಾಚ್ ವಿಚಾರವಾಗಿ ಶಾಸಕರಲ್ಲಿ ಗೊಂದಲ ಬೇಡ. ವಾಚ್ ‍ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ. ಸತ್ಯ ಏನು ಎನ್ನುವುದನ್ನು ಈಗಾಗಲೇ ಮಾಧ್ಯಮಗಳ ಸ್ಪಷ್ಟಪಡಿಸಿದ್ದೇನೆ. ಅದೇ ಸತ್ಯ…ಹಾಗಾಗಿ ಶಾಸಕರು ಸದನದಲ್ಲಿ ಒಗ್ಗಟ್ಟಿನಿಂದ  ಧೈರ್ಯವಾಗಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯುಬ್ಲೋಟ್ ವಾಚ್ ಪ್ರಕರಣದ ಬಗ್ಗೆ ಬಿಜೆಪಿ ಸದಸ್ಯರು ವಿಧಾನಸಭೆ, ವಿಧಾನಪರಿಷತ್ ನಲ್ಲಿ ಮಂಗಳವಾರ ಕೋಲಾಹಲ ನಡೆದಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಕೂಡಾ ತಿರುಗೇಟು ನೀಡಿದ್ದರು.

ಆ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ದುಬಾರಿ ವಾಚ್ ಪ್ರಕರಣದ ಕುರಿತಂತೆ ಆರೋಪಿಸುತ್ತಿರುವ ಪ್ರತಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಭೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
-ಉದಯವಾಣಿ

Write A Comment