ಕರ್ನಾಟಕ

ಶಿವರಾತ್ರಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ಮುಂಗಡ ಬುಕ್ಕಿಂಗ್ ಪ್ರಾರಂಭ

Pinterest LinkedIn Tumblr

ksrtcಬೆಂಗಳೂರು, ಮಾ.2- ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನಾಳೆಯಿಂದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಸ್ಥಳದ ಅಭಾವವಿರುವುದರಿಂದ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗಲು ನಗರದ ವಿವಿಧ ಪಿಕಪ್ ಪಾಯಿಂಟ್‌ಗಳಿಂದ ಮುಂಗಡ ಬುಕ್ಕಿಂಗ್ ವ್ಯವಸ್ಥೆಯ ವಾಹನಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಬಸ್‌ಗಳನ್ನು ಸ್ಯಾಟ್‌ಲೈಟ್ ಬಸ್ ನಿಲ್ದಾಣ, ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ,

ಗಂಗಾನಗರ, ಮಲ್ಲೇಶ್ವರಂ 18ನೆ  ಅಡ್ಡರಸ್ತೆ, ಜಯನಗರ 4ನೆ ಹಂತ ಮುಂತಾದ ಸ್ಥಳಗಳಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿದ್ದು, ಹೆಚ್ಚುವರಿ ವಾಹನಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಪ್ರಯಾಣಿಕರು ಸದರಿ ಸ್ಥಳಗಳಲ್ಲಿಯೇ ಪ್ರಯಾಣಿಸಬಹುದಾಗಿದೆ. ಮುಂಗಡ ಹಾಗೂ ಮುಂಗಡ ರಹಿತ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ದಾವಣಗೆರೆ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, ಶಿವಮೊಗ್ಗ ಮಾರ್ಗದ ಮುಂಗಡ ರಹಿತ ಮತ್ತು ಹೆಚ್ಚುವರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣದ ಮುಂಭಾಗದ ಬಿಎಂಟಿಸಿ ಸರ್ವೀಸ್ ರಸ್ತೆ ಮೂಲಕ ಕಾರ್ಯಾಚರಣೆ ಮಾಡಲಾಗುವುದು. ಸದರಿ ದಿನಗಳಂದು ಸಾರ್ವಜನಿಕ ಪ್ರಯಾಣಿಕರು ಬಸ್‌ಗಳಿಗೆ ಪರದಾಡುವ ಬದಲು ಮೊದಲೇ ಹೆಚ್ಚುವರಿ ಕರ್ನಾಟಕ ಸಾರಿಗೆ ವಾಹನಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಸರಿಯಾದ ಸಮಯಕ್ಕೆ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು.

Write A Comment