ಕರ್ನಾಟಕ

ವಾಚ್ ಪ್ರಕರಣ ಹೆಚ್‌ಡಿಕೆ ವಿರುದ್ಧ ಪ್ರತಿಭಟನೆ

Pinterest LinkedIn Tumblr

HDKumarswamy1clrಬೆಂಗಳೂರು, ಮಾ. ೨- ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಚ್‌ನ ಪ್ರಕರಣ ಮುಂದಿಟ್ಟು ರಾಜಕಾರಣ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಯುವ ಸಂಘಟನೆ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿದ್ದು, ಅದರ ಬಗ್ಗೆ ಮಾತನಾಡದ ಕುಮಾರಸ್ವಾಮಿಯವರು, ಕೇವಲ ಪ್ರಚಾರಕ್ಕೊಸ್ಕರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೇವಣ ಸಿದ್ದೇಶ್ವರ ಮಠದ ಬಸವರಾಜ್ ದೇವರು ಹರಿಹಾಯ್ದರು.

ರಾಜ್ಯದಲ್ಲಿ ಉತ್ತಮ ರೀತಿಯ ಆಡಳಿತ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮೇಲೆ ಇಲ್ಲದ ಆರೋಪಗಳನ್ನು ಹೊರಿಸಿ, ಅಧಿಕಾರದಿಂದ ಕೆಳಗಿಳಿಸಿ ಸೇಡಿನ ರಾಜಕಾರಣ ಮಾಡಿದ್ದನ್ನು ಯಾರೂ ಮರೆತಿಲ್ಲ. ಈಗ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಆರೋಪ ಹೊರಿಸಲಾಗುತ್ತಿದೆ ಎಂದು ಕಿಡಿಕಾರಿದ್ದು, ಕುಮಾರಸ್ವಾಮಿಯವರು ದ್ವೇಷ ರಾಜಕಾರಣ, ಜಾತಿ ರಾಜಕಾರಣ ಮುಂದುವರೆಸಿದ್ದೇಯಾದಲ್ಲಿ ಕುರುಬ ಸಮಾಜದ ಎಲ್ಲಾ ಸಂಘಟನೆಗಳು ಒಟ್ಟಾಗಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ರಾಜಶೇಖರ್, ದೊಡ್ಡಣ್ಣ ಮತ್ತಿತರರು ಭಾಗವಹಿಸಿದ್ದರು.

Write A Comment