ಕರ್ನಾಟಕ

ವಾಚ್ ಬಿಕ್ಕಟ್ಟಿಗೆ ಮಂಗಳ: ಸಿಎಂ ವಿವರಣೆ ಭರವಸೆ-ಪ್ರತಿಪಕ್ಷಗಳ ಧರಣಿ ಅಂತ್ಯ

Pinterest LinkedIn Tumblr

session

ಬೆಂಗಳೂರು, ಮಾ. ೩- ಮುಖ್ಯಮಂತ್ರಿ ಸಿದ್ಧರಾಮಯ್ಯನವರ ದುಬಾರಿ ವಾಚ್ ಹಗರಣ ಕುರಿತು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ನೀಡಿದ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ಧರಣಿಯನ್ನು ಹಿಂತೆಗೆದುಕೊಂಡ ಪ್ರಸಂಗ ವಿಧಾನಸಭೆಯಲ್ಲಿಂದು ನಡೆಯಿತು.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಳಿದು ಧರಣಿ ಮುಂದುವರೆಸಿದರು.

‘ವಾಚ್ ಎಲ್ಲಿಂದ ಬಂತು, ಯಾರು ಕೊಟ್ಟರು ಎಂಬುದನ್ನು ತಿಳಿಸಬೇಕು’ ಎಂದು ಘೋಷಣೆ ಕೂಗಿದರು.

ಈ ಹಂತದಲ್ಲಿ ಕಾಗೋಡು ತಿಮ್ಮಪ್ಪ ಅವರು ಸುಗಮ ಕಲಾಪಕ್ಕೆ ಸಹಕರಿಸಬೇಕು ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಅಗತ್ಯವಿದೆ. ಧರಣಿ ಕೈಬಿಟ್ಟು ನಿಮ್ಮ ಆಸನಗಳಿಗೆ ತೆರಳಿ ಎಂದು ಮನವಿ ಮಾಡಿಕೊಂಡರು.

ವಿರೋಧ ಪಕ್ಷದ ನಾಯಕ ಜಗದೀಶ್‌ಶೆಟ್ಟರ್, ದುಬಾರಿ ವಾಚ್ ಹಗರಣ ಕುರಿತು ನಿಯಮ 69ರಡಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರೆ ನಾವು ಸುದೀರ್ಘವಾಗಿ ಈ ಕುರಿತು ಬೆಳಕು ಚೆಲ್ಲುತ್ತಿದ್ದೇವು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಕೊಡಬೇಕು. ಮತ್ತು ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸಬೇಕು ಎಂದು ಮನವಿ ಮಾಡಿದರು.

ಕೆಲವು ಬಿಜೆಪಿ ಸದಸ್ಯರು, ನೀವು ಒತ್ತಡಕ್ಕೆ ಸಿಲುಕಿದ್ದೀರಿ ಎಂದು ಸಭಾಧ್ಯಕ್ಷರ ಗಮನ ಸೆಳೆದಾಗ, ನಗುತ್ತಲೆ ಉತ್ತರಿಸಿದ ಅವರು, ನಾನು ಯಾವುದೇ ಒತ್ತಡದಲ್ಲೂ ಇಲ್ಲ. ನೀವು ಧರಣಿ ಕೈಬಿಟ್ಟು ಕಲಾಪಕ್ಕೆ ಸಹಕರಿಸಬೇಕು ಎಂದು ಮತ್ತೆ ಮನವಿ ಮಾಡಿದರು.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ಸಂದರ್ಭದಲ್ಲಿ ನೀವು ಚರ್ಚೆ ಮಾಡಿ, ಇದಕ್ಕೆ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುತ್ತೇನೆ ಎಂದು ಸಭಾಧ್ಯಕ್ಷರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ವಾಪಸ್ ತೆಗೆದುಕೊಂಡು ತಮ್ಮ ತಮ್ಮ ಆಸನಗಳಿಗೆ ಮರಳಿದರು.

ಇದಾದ ಬಳಿಕ ಸಭಾಧ್ಯಕ್ಷರು ಮಾಜಿ ಸ್ವೀಕರ್ ರಮೇಶ್‌ಕುಮಾರ್ ರವರನ್ನು ಆಹ್ವಾನಿಸಿ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಕುರಿತು ಮಾತನಾಡುವಂತೆ ಸೂಚಿಸಿದರು.

Write A Comment