ಕರ್ನಾಟಕ

ಪ್ಲ್ಯಾಸ್ಟಿಕ್ ತಯಾರಿಕೆ, ಸಾಗಾಣಿಕೆ, ಸಂಗ್ರಹ, ಮಾರಾಟ ನಿಷೇಧಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Pinterest LinkedIn Tumblr

plasticಬೆಂಗಳೂರು, ಮಾ.3- ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲ್ಯಾಸ್ಟಿಕ್ ತಯಾರಿಕೆ, ಸಾಗಾಣಿಕೆ, ಸಂಗ್ರಹ, ಮಾರಾಟವನ್ನು ನಿಷೇಧಿಸಲು ಇಂದು ನಡೆದ ಸಚಿವ ಸಂಪುಟಸಭೆಯಲ್ಲಿ ತೀರ್ಮಾನಿಸಲಾಗಿದೆ. ನಲವತ್ತು ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಯ್ಲಾಸ್ಟಿಕ್ ತಟ್ಟೆ, ಲೋಟಾ, ಕ್ಯಾರಿಬ್ಯಾಗ್‌ಗಳನ್ನು ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಪ್ಲ್ಯಾಸ್ಟಿಕ್ ನಿಷೇಧಕುರಿತ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಸಲಹೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಸಲಹೆ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಲಹೆ, ಆಕ್ಷೇಪಣೆಗಳನ್ನು ಆಲಿಸಿದ ನಂತರ ಪ್ಲ್ಯಾಸ್ಟಿಕ್ ನಿಷೇಧಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ನರ್ಮ್ ಯೋಜನೆಯಡಿ ಕೆಎಸ್‌ಆರ್‌ಟಿಸಿಗೆ 350 ಬಸ್‌ಗಳನ್ನು ಖರೀದಿಸಲು ನಿರ್ಣಯ ಕೈಗೊಳ್ಳಲಾಗಿದೆ. ನಂತರ ಸಾರಿಗೆಗೆ 350 ಬಸ್‌ಗಳನ್ನು ನರ್ಮ್ ಯೋಜನೆಯಡಿ ಖರೀದಿಸಿದ ಬಸ್‌ಗಳನ್ನು ಬಳಸಾಗುತ್ತದೆ. ವಕ್ಫ್ ಆಸ್ತಿ ಕುರಿತು ಅಲ್ಪಸಂಖ್ಯಾತರ ಆಯೋಗ ನೀಡಿದ ವರದಿಯನ್ನು ಸದನದಲ್ಲಿ ಮಂಡಿಸಲು ಉದ್ದೇಶಿಸಲಾಯಿತು ಎಂದು ಮೂಲಗಳು ಹೇಳಿವೆ.

Write A Comment