ಕರ್ನಾಟಕ

ತೆರಿಗೆ ಸಂಗ್ರಹಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಜಾರ್ಜ್ ಚಾರ್ಜ್

Pinterest LinkedIn Tumblr

georgeಬೆಂಗಳೂರು, ಮಾ.4- ಹಣಕಾಸು ವರ್ಷಾಂತ್ಯಕ್ಕೆ ಕೇವಲ 27 ದಿನಗಳು ಬಾಕಿ ಇದ್ದು, ಉಳಿಕೆ 505 ಕೋಟಿ ತೆರಿಗೆ ಸಂಗ್ರಹಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಎಚ್ಚರಿಕೆ ನೀಡಿದ್ದಾರೆ. ಮೇಯರ್ ಮಂಜುನಾಥರೆಡ್ಡಿ, ಉಪಮೇಯರ್ ಹೇಮಲತಾಗೋಪಾಲಯ್ಯ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ್ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಈ ಎಚ್ಚರಿಕೆ ನೀಡಿದರು.

ಪ್ರಸಕ್ತ ಹಣಕಾಸು ವರ್ಷದಲ್ಲಿ ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ 1,784 ಕೋಟಿ ರೂ.ಗಳ ತೆರಿಗೆ ಸಂಗ್ರಹ ಮಾಡಲಾಗಿದೆ. ನಿಗದಿತ ತೆರಿಗೆ ಸಂಗ್ರಹಕ್ಕೆ ಇನ್ನು ಕೇವಲ 27 ದಿನ ಬಾಕಿ ಇದೆ. ಈ ಅವಧಿಯಲ್ಲಿ ಇನ್ನೂ 505 ಕೋಟಿ ತೆರಿಗೆ ಸಂಗ್ರಹ ಮಾಡಬೇಕು ಎಂದು ಸೂಚಿಸಿದರು. ಉಳಿದಿರುವ ತೆರಿಗೆ ಸಂಗ್ರಹಿಸಲು ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. 27 ದಿನದಲ್ಲಿ ಉಳಿದ ತೆರಿಗೆ ಸಂಗ್ರಹಿಸಬೇಕು ಎಂದು ಕಟ್ಟಾಜ್ಞೆ ವಿಧಿಸಿದರು. ಒಂದು ವೇಳೆ ಬಾಕಿ ತೆರಿಗೆ ಸಂಗ್ರಹಿಸಲುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಏಪ್ರಿಲ್ ತಿಂಗಳಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇವೆ. ಆ ಸಂದರ್ಭದಲ್ಲಿ ಆಯಾ ವಲಯಗಳಲ್ಲಿ ತೆರಿಗೆ ಸಂಗ್ರಹಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಖಚಿತ ಎಂದರು.

ಎತ್ತಂಗಡಿ ಖಚಿತ:
ಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಕೆಲ ಅಧಿಕಾರಿಗಳು ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಏಪ್ರಿಲ್ ನಂತರ 3ರಿಂದ 5 ವರ್ಷ ಮೇಲ್ಪಟ್ಟ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುವುದು ಎಂದು ಇದೇ ವೇಳೆ ಜಾರ್ಜ್ ಎಚ್ಚರಿಸಿದರು.

Write A Comment