ಕರ್ನಾಟಕ

ಬೆಂಗಳೂರಿನಲ್ಲಿ ರೈತರ ಮೇಲಿನ ಹಲ್ಲೆ ಖಂಡಿಸಿ ವಿವಿದ ಸಂಘಟನೆಗಳಿಂದ ಪ್ರತಿಭಟನೆ

Pinterest LinkedIn Tumblr

angaloreಕಡೂರು ಮಾ.6- ಬೆಂಗಳೂರಿನಲ್ಲಿ ನಡೆದ ರೈತರ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಹಾಗೂ ಸ್ವಾಭಿಮಾನಿ ಬಣದ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಎಂ. ನಿರಂಜನಮೂರ್ತಿ, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಆಸಕ್ತಿ ವಹಿಸುತ್ತಿಲ್ಲ ಎಂದು ದೂರಿದರು.

ನೆರೆಯ ರಾಜ್ಯದ ಆಂದ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ 80 ಟಿ.ಎಂ.ಸಿ ನೀರನ್ನು ಬಳಕೆ ಮಾಡಿಕೊಂಡಿದ್ದಾರೆ, ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವಪುರದಿನೇಶ್ ಮಾತನಾಡಿ ರಾಜ್ಯ ಸರ್ಕಾರ ಬಿಟ್ರಿಷರಂತೆ ಗುಂಡಾವರ್ತನೆ ಮಾಡುತ್ತಿದೆ, ನೀರು ಕೇಳಲು ಬೆಂಗಳೂರಿಗೆ ಬಂದ ರೈತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದರು. ರೈತರ ಮೇಲೆ ನಡೆದ ಹಲ್ಲೆಯ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ತಾಲೂಕಿನ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಕೃಷ್ಣ ಬಿ ಸ್ಕೀಮ್‌ನಲ್ಲಿ ಮೀಸಲಾಗಿರುವ 1.5 ಟಿ.ಎಂ.ಸಿ. ನೀರನ್ನು ಬಳಕೆ ಮಾಡಿಕೊಂಡು ತಾಲೂಕಿನ ಕೆರೆಗಳನ್ನು ತುಂಬಿಸುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ಮುಖಂಡರಾದ ಈಶ್ವರಪ್ಪ, ಸಿದ್ದರಾಮನಹಳ್ಳಿ ಜಗದೀಶ್, ಕೋಡಿಹಳ್ಳಿ ಪ್ರದೀಪ್, ರಕ್ಷಣಾ ವೇದಿಕೆಯ ವಿಜಯಕುಮಾರ್, ಅಣ್ಣಪ್ಪ, ಕಂದಬ ವೆಂಕಟೇಶ್, ಮರುಗುದ್ದಿ ಮನು, ಉಮೇಶ್, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

Write A Comment