ಕುಣಿಗಲ್, ಮಾ.7- ಲಾರಿಯೊಂದು ಮುಂದೆ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬೆಂಗಳೂರಿನ ಶ್ರೀನಗರ ವಾಸಿಗಳಾದ ವೆಂಕಟೇಶ್(26), ಪರಮೇಶ್ (25) ಸ್ಥಳದಲ್ಲೇ ಮೃತಪಟ್ಟ ನತದೃಷ್ಟರು. ಮತ್ತೊಬ್ಬ ವೆಂಕಟೇಶ್(25)ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ನಿನ್ನೆ ಸಂಜೆ ಮೂವರು ಒಂದೇ ಬೈಕ್‌ನಲ್ಲಿ ಹಾಸನದಿಂದ ವಾಪಸ್ ಬೆಂಗಳೂರಿಗೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಆಲಪ್ಪನಗುಡ್ಡೆ ಬಳಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿಯನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.