ಕರ್ನಾಟಕ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

Pinterest LinkedIn Tumblr

sslc_exam_6
ಬೆಂಗಳೂರು, ಮಾ.9-ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು  ಮಾ.11 ರಿಂದ 28ರವರೆಗೆ  ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿದಿನ ಬೆಳಗ್ಗೆ 9 ರಿಂದ 12.15ರವರೆಗೆ  ವಿವಿಧ ವಿಷಯಗಳ ಪರೀಕ್ಷೆ ನಡೆಯಲಿದೆ. 11 ರಂದು ಶುಕ್ರವಾರ ಬೆಳಿಗ್ಗೆ ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, 12 ರಂದು ಇತಿಹಾಸ, ಗಣಕವಿಜ್ಞಾನ, 14ರಂದು ಭೂಗೋಳಶಾಸ್ತ್ರ, ಗಣಿತ, 15ರಂದು ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್, 16 ರಂದು ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ,  17ರಂದು ಮನಃಶಾಸ್ತ್ರ, ಭೌತಶಾಸ್ತ್ರ, ಮಧ್ಯಾಹ್ನ 2 ರಿಂದ 5.15ರವರೆಗೆ ಕರ್ನಾಟಕ ಸಂಗೀತ , ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ನಡೆಯಲಿದೆ.

18ರಂದು ತರ್ಕಶಾಸ್ತ್ರ, ಶಿಕ್ಷಣ, 19 ರಂದು ಐಚ್ಛಿಕ ಕನ್ನಡ, ಸಂಖ್ಯಾಶಾಸ್ತ್ರ, ಗೃಹವಿಜ್ಞಾನ , 21 ರಂದು ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, 22 ರಂದು ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, 23 ರಂದು ಹಿಂದಿ, ತೆಲುಗು, 24 ರಂದು ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, 26 ರಂದು ಇಂಗ್ಲಿಷ್, 28ರಂದು ಕನ್ನಡ, ತಮಿಳು, ಮಲಯಾಳಂ, ಅರೇಬಿಕ್ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

Write A Comment