ಕರ್ನಾಟಕ

ರೇಣುಕಾಚಾರ್ಯ ವಿರುದ್ಧ ಮಾನನಷ್ಟ ಮೊಕದ್ದಮೆ

Pinterest LinkedIn Tumblr

27-renukacharya-big2ದಾವಣಗೆರೆ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅಧಿಕಾರ ದುರ್ಬಳಕೆ ಮೂಲಕ ನನ್ನ ವಿರುದ್ಧ ಚುನಾವಣೆ ನೀತಿ ಸಂಹಿತೆ ಕೇಸ್ ದಾಖಲಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಗುರುಪಾದಯ್ಯ ಹಿರೇಮಠ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಗ್ರಾಪಂ ಚುನಾವಣೆ ಸಂದರ್ಭ ಹಣ, ಆಮಿಷಗಳಿಗೆ ಒಳಗಾಗಬೇಡಿ ಎಂಬ ಭಿತ್ತಿಪತ್ರ ಜನರಿಗೆ ಹಂಚಿದ್ದನ್ನೇ ನೆಪವಾಗಿಟ್ಟುಕೊಂಡು ನನ್ನ ಮೇಲೆ ಕೇಸ್ ದಾಖಲಿಸಲಾಗಿದೆ. ಭಿತ್ತಿಪತ್ರದಲ್ಲಿ ಎಂ.ಪಿ ರೇಣುಕಾಚಾರ್ಯ ಮತ್ತು ಮೂವರು ಸಹೋದರರ ವಿರುದ್ಧ ವಿಶೇಷ ಜಿಲ್ಲಾ ಲೋಕಾಯುಕ್ತ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದು, ತನಿಖೆ ಪ್ರಾರಂಭಗೊಂಡಿದೆ ಎಂದು ನಮೂದಿಸಿದ್ದೇವೆ. ಇದನ್ನೇ ನೆಪವಾಗಿಟ್ಟುಕೊಂಡು ರೇಣುಕಾಚಾರ್ಯ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ ಎಂದು ದೂರಿದರು.

ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ನಾನು ನಿರ್ಧರಿಸಿದ್ದೇನೆ. ನನ್ನ ಹೋರಾಟ ಭ್ರಷ್ಟಾಚಾರದ ವಿರುದ್ಧವೇ ಹೊರತು ಯಾವುದೇ ವ್ಯಕ್ತಿ ವಿರುದ್ಧವಲ್ಲ ಎಂದು ತಿಳಿಸಿದರು.

ಶಾಂತರಾಜ್ ಬೊಮ್ಮನಹಳ್ಳಿ, ಎ. ಉಮೇಶ್, ಡಾ. ಉಮೇಶ್, ಎನ್.ಟಿ ಮಂಜುನಾಥ್ ಇದ್ದರು.

Write A Comment