ಕರ್ನಾಟಕ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಮೂವರ ದುರ್ಮರಣ

Pinterest LinkedIn Tumblr

Do_Not_Cross_Crime_Scene-e1456210645641ಬೆಂಗಳೂರು: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ನಗರದ ದೇವನಹಳ್ಳಿ ಬಳಿಯ ಆಹುತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 7ರ ಆವತಿ ಮೇಲ್ಸೇತುವೆ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಕಾರ್ಪಿಯೋದಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದು ಬಂದಿದೆ.

ಇನ್ನೂ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Write A Comment