ಬೆಂಗಳೂರು: ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಗುರುವಾರ ಪಿಯು ಬೋರ್ಡ್ ಮೇಲೆ ಸಿಐಡಿ ಅಧಿಕಾರಿಗಳಿಂದ ದಾಳಿ ನಡೆದಿದೆ.
ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿದೆ. ಮಾತ್ರವಲ್ಲದೇ ಪಿಯು ಬೋರ್ಡ್ ನಿರ್ದೇಶಕಿಯಿಂದ ಸಿಐಡಿ ಅಧಿಕಾರಿಗಳು ನಿಖರ ಹೇಳಿಕೆ ಪಡೆಯುತ್ತಿದ್ದಾರೆ. ನಿರ್ದೇಶಕಿ ಪಲ್ಲವಿ ಆಕೃತಿ ಮತ್ತುಇತರ ಅಧಿಕಾರಿಗಳನ್ನು ಸೋನಿಯಾ ನಾರಂಗ್ ವಿಚಾರಣೆ ನಡೆಸುತ್ತಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಾ.21ರಂದು ನಡೆಸಿದ ರಸಾಯನ ಶಾಸ್ತ್ರ (ಹೊಸ ಪಠ್ಯಕ್ರಮ) ವಿಷಯದ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.