ಕರ್ನಾಟಕ

ಮೂರು ದಿನದಲ್ಲಿ ನೀರಿಗೆ ಕ್ರಿಯಾ ಯೋಜನೆ

Pinterest LinkedIn Tumblr

WATERಬೆಂಗಳೂರು, ಮಾ. ೨೪- ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದ ಕ್ರಿಯಾ ಯೋಜನೆಗಳಿಗೆ ಮೂರು ದಿನಗಳಲ್ಲಿ ಅನುಮೋದನೆ ನೀಡುವಂತೆ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು.
ಬರಪರಿಸ್ಥಿತಿ ಕುರಿತು ನಡೆದ ಚರ್ಚೆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ವಿಳಂಬ ಮಾಡದೆ ಅನುಮೋದನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಸಡಿಲಗೊಳಿಸಲಾಗಿದೆ. ಅಗತ್ಯವಿರುವ ಕಡೆ ಬೋರ್‌ವೆಲ್ ಕೊರೆಸುವುದು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಅನುವು ಮಾಡಿಕೊಡಲಾಗಿದೆ ಎಂದು ಸಚಿವರು ಹೇಳಿದರು.

Write A Comment