ಕರ್ನಾಟಕ

ಯುವತಿ ಮೇಲೆ ಅತ್ಯಾಚಾರ ನಡೆಸಿ ಆರೋಪಿ ಪರಾರಿ

Pinterest LinkedIn Tumblr

rapeಬೆಳಗಾವಿ: ರಾಯಬಾಗ ತಾಲೂಕಿನ ಗ್ರಾಮವೊಂದರಲ್ಲಿ ಯುವಕನೊಬ್ಬ ಕುಡಿದ ಮತ್ತಿನಲ್ಲಿ 18 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ್ದು, ಈ ಸಂಬಂಧ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಇತ್ತೀಚೆಗೆ ರೇವಣ್ಣಾ ಬಂಡಿ (22) ಎಂಬ ಯುವಕನೊಬ್ಬ ಕುಡಿದ ಅಮಲಿನಲ್ಲಿ ಯುವತಿಯ ಮನೆಗೆ ನುಗ್ಗಿ ಆಕೆಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ. ಇದರಿಂದ ಮನನೊಂದ ಯುವತಿ ತಂದೆ-ತಾಯಿ ಮನೆಗೆ ಬಂದ ವೇಳೆ ನಡೆದ ಘಟನೆ ವಿವರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಪೋಷಕರು ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸಂಬಂಧ ಯುವತಿ ಪೋಷಕರು ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಆರೋಪಿ ರೇವಣ್ಣಾ ಬಂಡಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿ ಸಂಬಂಧಿಗಳು ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿ ಸೂಕ್ತ ರೀತಿಯಲ್ಲಿ ವಿಚಾರಣೆ ಮಾಡದೆ ಆರೋಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Write A Comment