ಕರ್ನಾಟಕ

ದೇವರಾಜ ಅರಸು ಛಾಯಾಚಿತ್ರ ಪ್ರದರ್ಶನ

Pinterest LinkedIn Tumblr

devaraj-ursclrಬೆಂಗಳೂರು, ಮಾ.೨೭: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಾರ್ಚ್ ೨೮ ಹಾಗೂ ೨೯ ರಂದು ಎರಡು ದಿನಗಳ ಕಾಲ ದೊಡ್ಡಬಳ್ಳಾಪುರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನ ಬಯಲು ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ ವ್ಯಕ್ತಿ ವಿಶೇಷತೆ ಹಾಗೂ ಸಾಧನೆಗಳ ಕುರಿತ ಅಪೂರ್ವ ಛಾಯಾ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.

ಮಾರ್ಚ್ ೨೮ ರಂದು ಬೆಳಿಗ್ಗೆ ೯.೦೦ ಗಂಟೆಗೆ ಶಾಸಕ ವೆಂಕಟರಮಣಯ್ಯ ಅವರು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸುವರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರುಗಳು, ಅಧಿಕಾರಿಗಳು ಪಾಲ್ಗೊಲ್ಲಲಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಈ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವ ದೃಷ್ಠಿಯಿಂದ ಬೆಳಿಗ್ಗೆ ೯.೦೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ದೇವರಾಜ ಅರಸುರವರು ತಮ್ಮ ಆಡಳಿತಾವದಿಯಲ್ಲಿ ಹಲವಾರು ಕ್ರಾಂತಿಕಾರಕ ತೀರ್ಮಾನಗಳನ್ನು ಕೈಗೊಂಡು ಅಖಂಡ ಕರ್ನಾಟಕದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಉಳುವವನೆ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಡ ಕೃಷಿಕರ ಬದುಕನ್ನು ಹಸನಾಗಿಸಿದ್ದಾರೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಕೀರ್ತಿ ಹಾಗೂ ಹಾವನೂರು ವರದಿಯನ್ನು ಅನುಷ್ಠಾನಕ್ಕೆ ತಂದು ಶೋಷಿತರು, ದೀನ-ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ವಿಶೇಷ ಮೀಸಲಾತಿಯನ್ನು ಕಲ್ಪಿಸಿಕೊಟ್ಟ ಕೀರ್ತಿ ಅರಸುರವರಿಗೆ ಸಂದಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಸಾಮಾನ್ಯರ ಬದುಕಿಗೆ ಪ್ರೇರಣೆಯಾಗಿದ್ದರು.

ಈ ಎಲ್ಲಾ ವಿಚಾರಧಾರೆಗಳನ್ನು ನೆನಪಿಸುವ ಛಾಯಾಚಿತ್ರ ಪ್ರದರ್ಶನ ಯುವಸಮುದಾಯದ ಬದುಕಿಗೆ ಪ್ರೇರಣಾ ಶಕ್ತಿಯಾಗಲಿದೆ.

Write A Comment