ಕರ್ನಾಟಕ

ಮಹದಾಯಿಗಾಗಿ ಮೋದಿ ಜೊತೆ ಮಾತುಕತೆ: ಗಡ್ಕರಿ

Pinterest LinkedIn Tumblr

gadkari

ಹುಬ್ಬಳ್ಳಿ: ದೆಹಲಿಗೆ ತೆರಳಿದ ನಂತರ ಮಹದಾಯಿ ಯೋಜನೆ ಅನುಷ್ಠಾನ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಮಹದಾಯಿಗಾಗಿ ಹೋರಾಟ ನಡೆಸುತ್ತಿರುವ ರೈತರು ಸಚಿವ ನಿತಿನ್ ಗಡ್ಕರಿ ಅವರಿಗೆ ಮಹದಾಯಿ ಯೋಜನೆ ಈ ಭಾಗದ ಜನರಿಗೆ ಜೀವ ಜಲ ಒದಗಿಸುವ ಪ್ರಮುಖ ಯೋಜನೆಯಾಗಿದೆ. ಆದ್ದರಿಂದ ಆದಷ್ಟು ಬೇಗ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸಿ ಎಂದು ಮನವಿ ಸಲ್ಲಿಸಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ನಿತಿನ್ ಗಡ್ಕರಿ ಅವರು ದೆಹಲಿಗೆ ತೆರಳಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯೋಜನೆ ಕುರಿತಂತೆ ಮನವರಿಕೆ ಮಾಡಿಕೊಟ್ಟು ಮಾತುಕತೆ ನಡೆಸುವೆ. ಸಾಧ್ಯವಾದಷ್ಟು ಮಟ್ಟಿಗೆ ಮಹದಾಯಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಮಹದಾಯಿ ಹೋರಾಟ ಸಮಿತಿಯ ರೈತರಾದ ಲೋಕನಾಥ ಹೆಬಸೂರ, ವೀರಣ್ಣ ಮಳಗಿ, ಸುಭಾಶಚಂದ್ರ ಗೌಡ ಪಾಟೀಲ, ಹೇಮನಗೌಡ ಬಸನಗೌಡ್ರ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಅನೇಕ ರೈತರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.

Write A Comment