ಕರ್ನಾಟಕ

ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯ ವ್ಯಕ್ತಿ ಗಂಭೀರ

Pinterest LinkedIn Tumblr

108

ಬೆಂಗಳೂರು: ನಗರದ ಹೊರವಲಯದ ಮಾಗಡಿಯ ಸೀಗೇಹಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಕರೆದೊಯ್ಯದೆ ಆಂಬುಲೆನ್ಸ್ ಚಾಲಕನೊಬ್ಬ ಅಮಾನವೀಯವಾಗಿ ವರ್ತಿಸಿದ್ದಾನೆ.

ಸೀಗೇಹಳ್ಳಿ ಗೇಟ್ ಬಳಿ ರಾತ್ರಿ ೮.೪೫ರ ವೇಳೆ ನಡೆದುಕೊಂಡು ಹೋಗುತ್ತಿದ್ದ ಹಾವೇರಿ ಮೂಲದ ವ್ಯಕ್ತಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದರೂ ಸಮಿಪದಲ್ಲೇ ಇದ್ದ ೧೦೮ ಅಂಬುಲೆನ್ಸ್ ಚಾಲಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಬಹಳ ಸಮಯ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದಾರೆ. ಸುದ್ದಿ ತಿಳಿದು ರಾತ್ರಿ ೯.೧೫ ರ ವೇಳೆಗೆ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗೆ ನಿಮ್ಹಾನ್ಸ್‌ಗೆ ಸೇರಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಅಮಾನವೀಯವೆಸಿದ ಎರಡು ಘಟನೆಗಳು ಕಳೆದ ೨ ತಿಂಗಳ ಅಂತರದಲ್ಲಿ ವರದಿಯಾಗಿದ್ದವು. ಅಂತಹುದೇ ಮತ್ತೊಂದು ಘಟನೆ ಮರುಕಳಿಸಿದೆ.

Write A Comment