ಕರ್ನಾಟಕ

ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಅತ್ಮಹತ್ಯೆಗೆ ಯತ್ನ

Pinterest LinkedIn Tumblr

gdg-death

ಗದಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.

ಮುಂಡರಗಿ ತಾಲೂಕಿನ ಹಮ್ಮಗಿ ತಾಂಡದಲ್ಲಿ ಈ ಘಟನೆ ನಡೆದಿದ್ದು, ಕುಮಾರ್ ಎಂಬವರು 25 ವರ್ಷದ ಪತ್ನಿ ದೇವಿಕುಮಾರಿ, 2 ವರ್ಷದ ಮಗು ಭವಾನಿ ಮತ್ತು 5 ತಿಂಗಳ ಮಗು ಚಿನ್ನುಗೆ ಆಹಾರದಲ್ಲಿ ವಿಷಬೆರಸಿದ ಕಾರಣ ಹೆಂಡತಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಪತಿ ಕುಮಾರ್ ಲಮಾಣಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಕುಮಾರ್ ಅವರನ್ನು ಈಗ ಮುಂಡರಗಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 2 ತಿಂಗಳಿಂದ ಕುಮಾರ್ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ರಾತ್ರಿ ವೇಳೆ ಯಾರೂ ಇಲ್ಲದ ವೇಳೆ ಈ ಘಟನೆ ನಡೆದದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment