ಕರ್ನಾಟಕ

ರಾಜ್ಯದಲ್ಲಿ ನಾಳೆಯಿಂದ ತೈಲ ಬೆಲೆಯಲ್ಲಿ ಏರಿಕೆ

Pinterest LinkedIn Tumblr

petrol

ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಮಾರಾಟ ತೆರಿಗೆಯನ್ನು ಬಜೆಟ್ ನಲ್ಲಿ ಸರ್ಕಾರ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯದಲ್ಲಿ ಇಂಧನ ಬೆಲೆಯಲ್ಲಿ ಏರಿಕೆಯಾಗಲಿದೆ.

ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಮಾರಾಟ ತೆರಿಗೆ ಏರಿಸದಂತೆ ಪ್ರತಿಪಕ್ಷ ಬಿಜೆಪಿ ಮಾಡಿದ ಮನವಿಯನ್ನು ಮುಖ್ಯಮಂತ್ರಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ತೈಲ ಬೆಲೆಯಲ್ಲಿ ಏರಿಕೆಯಾಗಲಿದೆ.

ವಿವಿಧ ಮೂಲಗಳಿಂದ 877 ಕೋಟಿ ಆದಾಯ ಕೊರತೆಯಾಗಿದ್ದು, ಅದನ್ನು ಸರಿದೂಗಿಸಲು ಇಂಧನಗಳಿಗೆ ಮಾರಾಟ ತೆರಿಗೆ ವಿಧಿಸಿರುವುದಾಗಿ 2016- 17 ನೇ ಸಾಲಿನ ಬಜೆಟ್ ಮಂಡಿಸುವ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಪೆಟ್ರೋಲ್ ಗೆ 1.89 ಪೈಸೆ ಹಾಗೂ ಡಿಸೇಲ್ ಗೆ 89 ಪೈಸೆ ಮಾರಾಟ ತೆರಿಗೆ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಾಲ್ಕು ಬಾರಿ ಅಬಕಾರಿ ತೆರಿಗೆ ಏರಿಸಿದೆ ಎಂದು ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆ ವೇಳೆ ತಿಳಿಸಿದ್ದಾರೆ.

Write A Comment