ಕರ್ನಾಟಕ

ಅತ್ಯಾಚಾರ ಪ್ರಕರಣ ಕೈಬಿಡುವಂತೆ ಕೋರಿ ಅರ್ಜಿ: ಇಂದು ಆದೇಶ ಸಾಧ್ಯತೆ

Pinterest LinkedIn Tumblr

Raghaveshwara Shree

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣವನ್ನು ಕೈ ಬಿಡುವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಸಲ್ಲಿಸಿದ್ದ ಅರ್ಜಿ ಕುರಿತಾದ ಆದೇಶವನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಪ್ರಕಟಿಸುವ ಸಾಧ್ಯತೆಯಿದೆ.

ಈ ಮಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರನ್ನು ಬದಲಾಯಿಸಿ ಬೇರೊಬ್ಬ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧದ ದೂರುದಾರರು ಗುರುವಾರ ನ್ಯಾಯಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸುವ ನಿರೀಕ್ಷೆಯಿದೆ.

Write A Comment