ಕರ್ನಾಟಕ

ಮತ್ತೆ ಸೋರಿಕೆಯಾಯ್ತು ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ; ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮುಂದೂಡಿಕೆ, ವಿದ್ಯಾರ್ಥಿಗಲ ಆಕ್ರೋಶ

Pinterest LinkedIn Tumblr

exame

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆ ಬರೆಯುವ ರಾಜ್ಯದ ವಿದ್ಯಾರ್ಥಿಗಳ ಅದೃಷ್ಟ ಸರಿಯಾಗಿದ್ದಂತೆ ಕಾಣುತ್ತಿಲ್ಲ. ಗುರುವಾರ ನಡೆಯಬೇಕಿದ್ದ ರಸಾಯನಶಾಸ್ತ್ರ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ. ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ.

ಇಂದು ಬೆಂಗಳೂರಿನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಭೇಟಿ ನೀಡಿದ್ದರು. ಆದರೆ ಪರೀಕ್ಷೆ ಮುಂದೂಡಿಕೆ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಎಂದು ತಿಳಿದುಬಂದಿದೆ.

ಇತ್ತ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Write A Comment