ಕರ್ನಾಟಕ

ಅಧಿಕಾರಿಗಳೇ ಹೊಣೆ ಎಂದ ಕಿಮ್ಮನೆ, ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು

Pinterest LinkedIn Tumblr

Shettarಬೆಂಗಳೂರು: ದ್ವಿತೀಯ ಪಿಯುಸಿ ರಸಾಯನ ವಿಜ್ಞಾನ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ವಿಧಾನಸಭೆಯಲ್ಲೂ ಗುರುವಾರ ಕೋಲಾಹಲ ಸೃಷ್ಟಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಘಟನೆಯ ನೈತಿಕ ಹೊಣೆಹೊತ್ತು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷ ಬಿಜೆಪಿ ಆಗ್ರಹಿಸಿದೆ.
ಅಧಿಕಾರಿಗಳೇ ಹೊಣೆ: ಇದಕ್ಕೂ ಮೊದಲು ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗೆ ಇಲಾಖೆ ಅಧಿಕಾರಗಳೇ ನೇರ ಹೊಣೆ. ಘಟನೆಗೆ ಅವರನ್ನೇ ಜವಾಬ್ದಾರಿ ಮಾಡಲಾಗುವುದು. ಇಲಾಖೆಯ ಆಡಳಿದಲ್ಲಿ ಸಂಪೂರ್ಣ ಬದಲಾವಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಹೇಳಿಕೆ: ಇನ್ನು, ಈ ಬೆಳವಣಿಗೆ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ತಪ್ಪು, ಮಕ್ಕಳಿಗೆ ತೊಂದರೆ ಆಗಿರುವುದು ನಿಜ. ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದೆ. ಇದನ್ನೂ ತನಿಖೆ ಮಾಡಲಾಗುವುದು ಎಂದಿದ್ದಾರೆ.
ಪದತ್ಯಾಗಕ್ಕೆ ಶೆಟ್ಟರ್ ಪಟ್ಟು: ಆದರೆ, ಸರ್ಕಾರದ ಉತ್ತರಕ್ಕೆ ತೃಪ್ತರಾಗದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಗೆ ಸಂಪೂರ್ಣವಾಗಿ ನೈತಿಕ ಜವಾಬ್ದಾರಿ ಹೊತ್ತು ಕಿಮ್ಮನೆ ರತ್ನಾಕರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Write A Comment