ಕರ್ನಾಟಕ

ಪಿಯುಸಿ ರಾಸಾಯನಶಾಸ್ತ್ರದ ಪ್ರಶ್ನೆ ಪತ್ರಿಕೆ ಲೀಕ್ : ಅಗತ್ಯ ತುರ್ತು ಕ್ರಮಕ್ಕೆ ಸಿಎಂ ಸೂಚನೆ

Pinterest LinkedIn Tumblr

cmಬೆಂಗಳೂರು, ಮಾ.31- ಇಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ರಾಸಾಯನ ಶಾಸ್ತ್ರದ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಬಹಿರಂಗವಾಗಿ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಸೂಚಿಸಿದ್ದಾರೆ.

ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವ ಬಗ್ಗೆ ಮಾಹಿತಿ ಪಡೆದು ಎಲ್ಲರಿಗೂ ಸಮಾಧಾನವಾಗುವಂತಹ ತುರ್ತು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ಮಾಡಿದ್ದಾರೆ.

ಈಗಾಗಲೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿ ಒಂದು ಬಾರಿ ಪರೀಕ್ಷೆ ಮುಂದೂಡಿಕೆಯಾಗಿರುವುದರಿಂದ ಸಹಜವಾಗಿಯೇ ವಿದ್ಯಾರ್ಥಿಗಳು ಅಸಮಾಧಾನಗೊಂಡಿರುತ್ತಾರೆ. ಮತ್ತೊಮ್ಮೆ ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವುದರಿಂದ ಅಸಮಾಧಾನ ಉಲ್ಬಣಗೊಂಡಿರುತ್ತದೆ. ಬಹಿರಂಗವಾಗಿರುವುದಕ್ಕೆ ಕಾರಣಗಳನ್ನು ತಿಳಿದು ಎಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

Write A Comment