ಕರ್ನಾಟಕ

ಭಾರತರತ್ನಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರು ಶಿಫಾರಸು: ಸಿಎಂ ಸಿದ್ದರಾಮಯ್ಯ

Pinterest LinkedIn Tumblr

siddaganga

ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಮಠದ, ಪದ್ಮವಿಭೂಷಣ ಡಾ. ಶಿವಕುಮಾರಸ್ವಾಮೀಜಿ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸು ಮಾಡುವುದಾಗಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು 109ನೇ ವಸಂತಕ್ಕೆ ಕಾಲಿಟ್ಟ ಸಿದ್ದಗಂಗಾ ಶ್ರೀಗಳಿಗೆ ಸಿಎಂ ಶುಭಾಶಯ ಕೋರಿ, ಆರ್ಶೀವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶಿವಕುಮಾರ ಸ್ವಾಮೀಜಿ ಅವರ ಸಾಧನೆ ಅಪಾರವಾದುದು. ನಮ್ಮ ನಾಡಿನ ಶಿಕ್ಷಣ, ಧಾರ್ವಿುಕ ಕ್ಷೇತ್ರಕ್ಕೆ ಅವರು ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದರು.

ಗೃಹ ಸಚಿವ ಡಾ.ಜಿ ಪರಮೇಶ್ವರ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ತಮ್ಮ ಸಚಿವ ಸಂಪುಟದ ಕೆಲವು ಸಹದ್ಯೋಗಿಗಳೊಂದಿಗೆ ಮಠಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು, ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.

ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಸ್ವಾಮೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅನೇಕ ಭಕ್ತಾದಿಗಳು ಸಿದ್ಧಗಂಗಾ ಮಠಕ್ಕೆ ತೆರಳಿ, ಸ್ವಾಮೀಜಿ ಅವರ ಆರ್ಶೀವಾದಿ ಪಡೆಯುತ್ತಿದ್ದಾರೆ. ಮಠದ ಆವರಣದಲ್ಲಿ ಹಬ್ಬದ ವಾತಾವರಣ ಮೂಡಿದೆ.

Write A Comment