ಕರ್ನಾಟಕ

ಪಿಯು ಮೌಲ್ಯಮಾಪನ ಬಹಿಷ್ಕಾರ ಸಿಎಂ ಜತೆ ಸಂಧಾನ ವಿಫಲ

Pinterest LinkedIn Tumblr

1a6c-lrಬೆಂಗಳೂರು, ಏ. ೧- ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಉಪನ್ಯಾಸಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಬಹಿಷ್ಕಾರ ನಿರ್ಧಾರ ಅಚಲ ಎಂದು ಪಿಯುಸಿ ಉಪನ್ಯಾಸಕರು ಹೇಳಿದ್ದಾರೆ.
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಅಧ್ಯಾಪಕರ ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.
ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಹಿಷ್ಕಾರ ನಿರ್ಧಾರ ಕೈ ಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಮುಖ್ಯಮಂತ್ರಿಗಳ ಮಾತಿಗೆ ಸ್ಪಂದಿಸದ ಅಧ್ಯಾಪಕರ ಸಂಘದ ಪದಾಧಿಕಾರಿಗಳು, ವೇತನ ತಾರತಮ್ಯ ನಿವಾರಿಸಬೇಕು. ಕುಮಾರನಾಯ್ಕ್ ವರದಿಯನ್ನು ಜಾರಿಗೊಳಿಸುವಂತೆ ಪಟ್ಟು ಹಿಡಿದು ಈಡೇರುವವರೆಗೂ ಬಹಿಷ್ಕಾರ ನಿರ್ಧಾರ ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿ, ಮುಂದೆ ಇವೆಲ್ಲವನ್ನು ಪರಿಶೀಲಿಸುತ್ತೇನೆ ಎಂಬ ಭರವಸೆ ನೀಡಿದರೂ ಇದಕ್ಕೆ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಪೂರಕವಾಗಿ ಸ್ಪಂದಿಸಲಿಲ್ಲ ಎನ್ನಲಾಗಿದೆ.
ಈ ಸಭೆಯಲ್ಲಿ ರಾಜೀ ಕಬೂಲಿಗಳು ಯಶಸ್ವಿಯಾಗದ ಕಾರಣ ಮತ್ತೆ ಈ ತಿಂಗಳ 3 ರಂದು ಸಭೆ ಸೇರಿ ಎಲ್ಲವನ್ನು ಪರಿಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ.
@12bc = ಬಹಿಷ್ಕಾರ ಅಚಲ
ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರಳೆ, ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಹಿಷ್ಕಾರ ನಿರ್ಧಾರದಲ್ಲಿ ಬದಲಿಲ್ಲ. ಬಹಿಷ್ಕಾರವನ್ನು ಕೈ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮತ್ತೆ 3ನೇ ತಾರೀಖು ಸಭೆ ಸೇರಿ ಚರ್ಚಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.
ಇಂದಿನ ಸಭೆಯಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಖಚಿತ ಭರವಸೆಯನ್ನು ನೀಡದ ಕಾರಣ ಸಭೆ ವಿಫಲವಾಗಿದೆ. ನಾವು ದಿಢೀರ್ ಮೌಲ್ಯ ಮಾಪನ ಬಹಿಷ್ಕಾರ ಮಾಡುತ್ತಿಲ್ಲ. ನವೆಂಬರ್‌ನಿಂದ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಕ್ಷಮೆ ಕೇಳುತ್ತೇವೆ. ಹೋರಾಟ ಅನಿವಾರ್ಯ ಎಂದು ಮೌಲ್ಯಮಾಪನ ಬಹಿಷ್ಕಾರ ನಿರ್ಧಾರವನ್ನು ತಿಮ್ಮಯ್ಯ ಪುರಳೆ ಸಮರ್ಥಿಸಿಕೊಂಡರು.
ಸಭೆಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್, ವಿಧಾನ ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಸದಸ್ಯರುಗಳು ಪಾಲ್ಗೊಂಡಿದ್ದರು.

Write A Comment