ಕರ್ನಾಟಕ

ವದಂತಿ ನಂಬಬೇಡಿ; ಎಸ್ಸೆಎಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ

Pinterest LinkedIn Tumblr

home_img_3ಬೆಂಗಳೂರು: ಒಂದೆಡೆ ರಾಜ್ಯದ ಪರೀಕ್ಷಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಿಯು ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಘಟನೆಯ ಗೊಂದಲ ತಾರಕಕ್ಕೇರಿದ್ದರೆ, ಮತ್ತೊಂದೆಡೆ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ದಟ್ಟವಾಗಿ ಹಬ್ಬುವ ಮೂಲಕ ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಆದರೆ ಇಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಎಸ್ಸೆಸ್ಸೆಲ್ಸಿ ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ಮನವಿ ಮಾಡಿದ್ದಾರೆ.

ಎಸ್ ಎಸ್ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಪೋಷಕರು ವದಂತಿಗಳಿಗೆ ಕಿವಿಗೊಡಬಾರದು. ಎಸ್ಸೆಎಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಸ್ಸೆಎಸ್ಸೆಲ್ಸಿ ಇಂದಿನ ವಿಜ್ಞಾನ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ವಾಟ್ಸಪ್ ಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಗಳನ್ನು ಪರಿಶೀಲಿಸಿದ್ದೇವೆ. ಆದರೆ ಅದ್ಯಾವುದು ತಾಳೆಯಾಗಿಲ್ಲ. ಇದು ಬರೇ ವದಂತಿ. ಹಾಗಾಗಿ ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೆ, ವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
-ಉದಯವಾಣಿ

Write A Comment