ಕರ್ನಾಟಕ

ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಏ.4 ರಂದು ಧರಣಿ ಸತ್ಯಾಗ್ರಹ : ಪ್ರತಾಪ್‌ಸಿಂಹ

Pinterest LinkedIn Tumblr

rajuಮೈಸೂರು, ಏ.2- ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಆರೋಪಿಗಳನ್ನು ಇದುವರೆಗೂ ಬಂಧಿಸದಿರುವುದನ್ನು ಖಂಡಿಸಿ ಏ.4ರಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಂಸದ ಪ್ರತಾಪ್‌ಸಿಂಹ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಗೃಹ ಸಚಿವರನ್ನು ಭೇಟಿ ಮಾಡಿದಾಗಲೂ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದರು. ಆದರೆ, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಆರೋಪಿಸಿದರು.

ಧರಣಿ ನಡೆಯುವ ದಿನ ಮುಖಂಡರು ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯಾದ್ಯಂತ ಉಗ್ರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು. ಧರಣಿ ಸತ್ಯಾಗ್ರಹದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಸಿ.ಟಿ.ರವಿ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು. ನಗರಾಧ್ಯಕ್ಷ ಮಾರುತಿರಾವ್ ಪವಾರ್ ಮಾತನಾಡಿ, ಮೈಸೂರು ಬಂದ್ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಕೇವಲ ಕೆಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಆದರೆ, ಪೊಲೀಸರಿಗೆ ಲಾಂಗ್, ಮಚ್ಚು ತೋರಿಸಿದ ಯಾರನ್ನೂ ಬಂಧಿಸಿಲ್ಲ. ತಾಕತ್ತಿದ್ದರೆ ಅವರನ್ನು ಮೊದಲು ಬಂಧಿಸಲಿ ಎಂದು ಸವಾಲು ಹಾಕಿದರು.

Write A Comment