ಕರ್ನಾಟಕ

ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ : ಸಾಲಬಾಧೆಗೆ ಇಬ್ಬರು ಅನ್ನದಾತರ ಸಾವು

Pinterest LinkedIn Tumblr

raitaತುಮಕೂರು, ಏ.2- ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಚಿಣ್ಣನಾಯಕನಪಾಳ್ಯ ಗ್ರಾಮದಲ್ಲಿ ನಡೆದಿದೆ.

ರಾಕೃಷ್ಣ(55) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಸಿ.ಎಸ್.ಪುರದ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗದೆ ಹೆದರಿ ಇಂದು ಬೆಳಗ್ಗೆ ಮನೆ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಯವರು ಕೊಟ್ಟಿಗೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ, ಏ.2- ಸಾಲಬಾಧೆ ತಾಳಲರಾದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರೆಡ್ಡಿಗೊಲ್ಲಹಳ್ಳಿಯಲ್ಲಿ ನಡೆದಿದೆ. ಹನುಮಪ್ಪ(50) ಆತ್ಮಹತ್ಯೆಗೆ ಶರಣಾದ ರೈತ. ಈತ ಐಸಿಐಸಿಐ ಬ್ಯಾಂಕ್‌ನಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ತನ್ನ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದು, ಮಾಡಿದ ಸಾಲ ತೀರಿಸಲಾಗಿದೆ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Write A Comment