ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಮಾರಕ ಮಾದಕ ವಸ್ತು ಕೊಕೇನ್ ಮಾರಾಟ ಜಾಲ : ನಾಲ್ಕು ಮಂದಿ ಬಂಧನ

Pinterest LinkedIn Tumblr

siliconಬೆಂಗಳೂರು, ಏ.3- ಮಾರಕ ಮಾದಕ ವಸ್ತು ಕೊಕೇನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿ 5ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಹೊಸಕೋಟೆ ತಾಲ್ಲೂಕಿನ ದಿವಾಕರ್, ರಾಮಾಂಜನಪ್ಪ, ನರಸಿಂಹಮೂರ್ತಿ, ರಾಜೇಶ್ ಬಂಧಿತ ಆರೋಪಿಗಳು. ಬಂಧಿತರು ಹೊಸಕೋಟೆ ಸಮೀಪ ತೊರವನಹಳ್ಳಿ ಬಳಿ ಇರುವ ಡಾಬಾ ಹತ್ತಿರ ಕೊಕೇನ್ ಮಾರಾಟ ಮಾಡಲು ಯತ್ನಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,

ಅವರ ಬಳಿ ಇದ್ದ ಸುಮಾರು 2ಕೋಟಿ ಮೌಲ್ಯದ ಕೊಕೈನನ್ನು ವಶಪಡಿಸಿಕೊಂಡಿದ್ದಾರೆ. ಎಸ್‌ಪಿ ರಮೇಶ್ ಎಸ್. ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಘಟಕದ ಇನ್ಸ್‌ಪೆಕ್ಟರ್ ಬಸವರಾಜ್ ಖೇಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಗಳು ಎಲ್ಲಿಂದ ಈ ಮಾದಕ ವಸ್ತುವನ್ನು ತಂದಿದ್ದರು ಎಂಬುದು ತಿಳಿದು ಬಂದಿಲ್ಲ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಸತ್ಯಾಸತ್ಯತೆ ಹೊರ ಬರಬೇಕಿದೆ. ಕಳೆದ ವಾರವಷ್ಟೇ ಪರಪ್ಪನ ಅಗ್ರಹಾರ ಪೊಲೀಸರು ತಮಿಳುನಾಡು ಮೂಲದ ಮೂವರನ್ನು ಬಂಧಿಸಿ ಒಂದು ಕೋಟಿಗೂ ಹೆಚ್ಚು ಮೌಲ್ಯದ ಬ್ರೌನ್‌ಶುಗರ್ ವಶಪಡಿಸಿಕೊಂಡಿದ್ದರು.

Write A Comment