ಕರ್ನಾಟಕ

ಪಿಯು ಮೌಲ್ಯಮಾಪನ ಬಹಿಷ್ಕಾರ ವಾಪಸಿಲ್ಲ

Pinterest LinkedIn Tumblr

pucಬೆಂಗಳೂರು, ಏ. ೩- ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಪಿಯುಸಿ ಉಪನ್ಯಾಸಕರು ಮತ್ತು ಪ್ರಾಂಶುಪಾಲರು, ಮೌಲ್ಯಮಾಪನ ಬಹಿಷ್ಕರಿಸಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಾಂಶುಪಾಲರು ಹಾಗೂ ಸಂಘದ ನಾನಾ ಜಿಲ್ಲಾಧ್ಯಕ್ಷರು ಸೇರಿದಂತೆ, 150ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ಯಾವುದೇ ಕಾರಣಕ್ಕೂ ಪಿಯುಸಿ ಪರೀಕ್ಷೆ ಮೌಲ್ಯಮಾಪನಕ್ಕೆ ಹಾಜರಾಗುವುದಿಲ್ಲ. ಈಗಾಗಲೇ ನಿನ್ನೆ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ವೇತನ ತಾರತಮ್ಯವನ್ನು ಸರಿಪಡಿಸುವಂತೆ ಸರ್ಕಾರ ನೇಮಿಸಿರುವ ಕುಮಾರ್ ನಾಯಕ್ ವರದಿ ಶಿಫಾರಸು ಮಾಡಿದ್ದರೂ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಅನಿವಾರ್ಯವಾಗಿ ಮೌಲ್ಯ ಮಾಪನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶ್ರೀಕಂಠಯ್ಯ ಮಾತನಾಡಿ, ಸರ್ಕಾರದ ಹಠಮಾರಿ ಧೋರಣೆಯಿಂದಾಗಿ ಈ ಸಮಸ್ಯೆ ಉಂಟಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸರ್ಕಾರವೇ ಚೆಲ್ಲಾಟವಾಡುತ್ತಿದೆ.
ಮೌಲ್ಯ ಮಾಪನ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಉತ್ತರಿಸಿದರು.

Write A Comment