ಕರ್ನಾಟಕ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ : ಮೂವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವು

Pinterest LinkedIn Tumblr

accident

ಮಂಡ್ಯ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಇಂಡುವಾಳ ಬಳಿಯ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ‘ಮಿಮ್ಸ್’ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಂಗಳೂರು ಮೂಲದ ವೆಂಕಟೇಶ್ (23), ದಿನೇಶ್ (22) ಹಾಗೂ ನಂದ (23) ಮೃತಪಟ್ಟ ವಿದ್ಯಾರ್ಥಿಗಳು.

ಉಳಿದಂತೆ ಸಂತೋಷ್, ವಿಕಾಶ್, ಸಂದೀಪ್, ಸುರೇಶ್, ಗೋವಿಂದ್, ಸದ್ದಾಂ ಎಂಬುವವರಿಗೆ ಗಾಯಗಳಾಗಿವೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲರೂ ಬೆಂಗಳೂರಿನ ದಯಾನಂದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

‘ಮಿಮ್ಸ್’ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. 11 ಮಂದಿ ಸ್ನೇಹಿತರು ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದಿದೆ. 20 ಮೀಟರ್‌ವರೆಗೂ ಸುಮಾರು ನಾಲ್ಕು ಬಾರಿ ಕಾರು ಪಲ್ಟಿ ಹೊಡೆದಿದ್ದು, ಸಂಪೂರ್ಣ ಜಖಂಗೊಂಡಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment