ಕಲಬುರಗಿ: ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಕಚೇರಿಗೆ ಮುಳ್ಳು ಬಡಿದ ಘಟನೆ ಸೋಮವಾರ ಮಧ್ಯಾಹ್ನ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮ ಪಂಚಾಯತ್ನಲ್ಲಿ ನಡೆದಿದೆ.
ನೀರಿಗಾಗಿ ಪರದಾಡಬೇಕಾದ ಸ್ಥಿತಿಯಲ್ಲಿ ಗ್ರಮ ಪಂಚಾಯತ್ ನೆರವಿಗೆ ಬಾರದೇ ಇದ್ದರೆ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಕಚೇರಿಯ ಬಾಗಿಲು ಮುಚ್ಚಿ, ಮುಳ್ಳು ಬಡಿದು ಆಕ್ರೋಶ ವ್ಯಕ್ತಪಡಿಸಿದರು.
ಐನೋಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.