ಕರ್ನಾಟಕ

ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್: ದ್ವಿತೀಯ ಪಿಯುಸಿಯ ಎಲ್ಲಾ 6 ಪ್ರಶ್ನೆ ಪತ್ರಿಕೆಗಳು ಲೀಕ್!

Pinterest LinkedIn Tumblr

IPS Officer Sonia Narang.Express photo by Nagaraja Gadekal

ಬೆಂಗಳೂರು: ಪದೇಪದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದರಿಂದ ಆತಂಕಗೊಂಡಿರುವ ವಿದ್ಯಾರ್ಥಿಗಳಿಗೆ ಈಗ ಮತ್ತೊಂದು ಶಾಕ್, ದ್ವಿತೀಯ ಪಿಯುಸಿಯ ಎಲ್ಲಾ ಆರು ಪ್ರಶ್ನೆ ಪತ್ರಿಕೆಗಳು ಸೋರಿಯಾಗಿರುವುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ.

ಕನ್ನಡ, ಇಂಗ್ಲಿಷ್ ಸೇರಿದಂತೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ಪಿಯು ಬೋರ್ಡ್ ಕೆಲವು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಿಯು ಬೋರ್ಡ್ ನ ಕೆಲವು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾಗಿರುವ ಶಿವಕುಮಾರಸ್ವಾಮಿ ಹಾಗೂ ಪುತ್ರ ದಿನೇಶ್, ಕಿರಣ್ ಗಾಗಿ ಸಿಐಡಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕಳೆದ ಮಾರ್ಚ್ 21ರಂದು ಹಾಗೂ ಮಾರ್ಚ್ 31ರಂದು ನಡೆಯಬೇಕಿದ್ದ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Write A Comment