ಕರ್ನಾಟಕ

ಶಾಸಕರ ಒತ್ತಡ ಪುನಾರಚನೆಗೆ ಸಿ.ಎಂ. ಇಂಗಿತ

Pinterest LinkedIn Tumblr

ಸಿಬೆಂಗಳೂರು, ಏ. ೫- ಸಚಿವ ಸಂಪುಟ ಪುನಾರಚನೆಗೆ ಶಾಸಕರ ಒತ್ತಡಗಳು ಹೆಚ್ಚುತ್ತಿರುವ ಬೆನ್ನಲ್ಲೆ ಸಂಪುಟ ಪುನಾರಚನೆ ರಚಿಸುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್‌ರವರ 109ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಬಾಬು ಜಗಜೀವನರಾಮ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ನೊಂದಿಗೆ ಚರ್ಚಿಸಲು ಶೀಘ್ರ ದೆಹಲಿಗೆ ತೆರಳುವುದಾಗಿ ಹೇಳಿದರು.
ದೆಹಲಿಗೆ ತೆರಳಿ ವರಿಷ್ಠರ ಅನುಮತಿ ಪಡೆದು ಸದ್ಯದಲ್ಲಿಯೇ ಸಂಪುಟ ಪುನಾರಚನೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದರು.

ಸಂಪುಟ ಪುನಾರಚನೆಗೆ ಸಮಾನ ಮನಸ್ಕ ಶಾಸಕರುಗಳು ಸಭೆ ಸೇರಿ ಒತ್ತಡ ಹೇರಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳು ಸಂಪುಟ ಪುನಾರಚನೆಯ ಮಾತುಗಳನ್ನು ಹೇಳಿರುವುದು ರಾಜಕೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದೆ.

ಕಾನೂನಿನಂತೆ ಕ್ರಮ

ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಸಿಐಡಿ ಬಂಧಿಸಿದೆ. ಸಚಿವರ ಆಪ್ತ ಸಹಾಯಕರು ಇದರಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಯಾರೇ ಆಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಾನೂನಿಗೆ ಯಾರೂ ಅತೀಥರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಬುಜಿ ಗುಣಗಾನ

ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್ ಒಬ್ಬ ಉತ್ತಮ ಆಡಳಿತಗಾರರಾಗಿದ್ದರು ಎಂದು ಅವರು ಇದಕ್ಕೂ ಮೊದಲು ಹೇಳಿ ಬಾಬುಜಿರವರ ಆದರ್ಶ ಎಲ್ಲರಿಗೂ ಸ್ಫೂರ್ತಿ ಎಂದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Write A Comment