ಕರ್ನಾಟಕ

ಎಲ್ಲಾ ಪ್ರಶ್ನೆ ಪತ್ರಿಕೆ ಲೀಕ್?: ಸಿಐಡಿಯಿಂದ ಆರೋಪಿಗಳ ಮಕ್ಕಳ ಉತ್ತರ ಪತ್ರಿಕೆ ಪರಿಶೀಲನೆ

Pinterest LinkedIn Tumblr

sonia

ಬೆಂಗಳೂರು: ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಐಡಿ, ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಬಂಧಿತ ಆರೋಪಿಗಳ ಮಕ್ಕಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಮುಂದಾಗಿದೆ.

ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ರುದ್ರಪ್ಪ ಪುತ್ರಿಯ ಹಾಗೂ ಓಬಳರಾಜ್ ಪುತ್ರನ ಎಲ್ಲಾ ಉತ್ತರ ಪತ್ರಿಕೆಗಳನ್ನು ನೀಡುವಂತೆ ಸಿಐಡಿ ಅಧಿಕಾರಿಗಳು ಪದವಿ ಪೂರ್ವ ಶಿಕ್ಷಣ ಮಂಡಳಿಗೆ ಸೂಚಿಸಿದ್ದಾರೆ.

ರಸಾಯನಶಾಸ್ತ್ರ ಬಿಟ್ಟು ಭೌತಶಾಸ್ತ್ರ, ಗಣಿತ, ಜೀವಶಾಸ್ತ್ರ, ಕನ್ನಡ ಹಾಗೂ ಇಂಗ್ಲಿಷ್ ವಿಷಯಗಳ ಉತ್ತರ ಪತ್ರಿಕೆಗಳನ್ನು ನೀಡುವಂತೆ ತನಿಖಾ ಅಧಿಕಾರಿಗಳು ಪಿಯು ಬೋರ್ಡ್ ಸೂಚಿಸಿದ್ದಾರೆ.

ತನಿಖೆ ವೇಳೆ, ಆರೋಪಿಗಳು ತಮ್ಮ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಕನ್ನಡ, ಇಂಗ್ಲಿಷ್ ಸೇರಿದಂತೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ್ದು, ಇದರಲ್ಲಿ ಪಿಯು ಬೋರ್ಡ್ ನ ಕೆಲವು ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮಾರ್ಚ್ 21ರಂದು ಹಾಗೂ ಮಾರ್ಚ್ 31ರಂದು ಎರಡು ಬಾರಿ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Write A Comment