ಕರ್ನಾಟಕ

ಎಸಿಬಿ ಕಾರ್ಯನಿರ್ವಹಣೆಗೆ ಹೈಕೋರ್ಟ್‌ ತಡೆ

Pinterest LinkedIn Tumblr

High-court-of-Karnataka-111ಬೆಂಗಳೂರು (ಪಿಟಿಐ): ರಾಜ್ಯ ಸರ್ಕಾರ ಹೊಸದಾಗಿ ರಚಿಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕಾರ್ಯನಿರ್ವಹಣೆಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಯೆ ತನಿಖೆ ನಡೆಸಬೇಕು ಮತ್ತು ಬಾಕಿ ಉಳಿದಿರುವ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಎಸಿಬಿಗೆ ವರ್ಗಾಯಿಸುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ.
ವಕೀಲ ಬಿ.ಜಿ. ಚಿದಾನಂದ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ್‌ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಎಸಿಬಿ ರಚನೆಯ ಸಿಂಧುತ್ವ ಪ್ರಶ್ನಿಸಿ ಬಿ.ಜಿ. ಚಿದಾನಂದ ಅವರು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಏಪ್ರಿಲ್‌ 12ಕ್ಕೆ ಮುಂದೂಡಲಾಗಿದೆ.

Write A Comment