ಬೆಂಗಳೂರು:ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬುಧವಾರ ಬಂಧಿತರಾಗಿದ್ದ ದೈಹಿಕ ಶಿಕ್ಷಕ ಅನಿಲ್ ಕುಮಾರ್ ಮತ್ತು ಸತೀಶ್ ಅವರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ 9 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಮಲ್ಲೇಶ್ವರ ನಿವಾಸಿ ಎಚ್.ಕೆ.ಅನಿಲ್ ಕುಮಾರ್ ಹಾಗೂ ಮತ್ತೀಕೆರೆಯ ಸತೀಶ್ ಅವರನ್ನು ಬಂಧಿಸಿತ್ತು. ಅನಿಲ್ ಕುಮಾರ್ ಮತ್ತು ಸತೀಶ್ ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ನಿಂದ ಪಿಯುಸಿ ಪ್ರಶ್ನೆ ಪತ್ರಿಕೆ ಪಡೆದು ಹಣಕ್ಕೆ ಮಾರಾಟ ಮಾಡಿದ್ದರು ಎಂದು ಸಿಐಡಿ ಡಿಐಜಿ ಸೋನಿಯಾ ನಾರಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಅಂಚೆ ಕಚೇರಿ ಸಿಬ್ಬಂದಿ ವಿಚಾರಣೆ:
ಮತ್ತೊಂದೆಡೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಿಐಡಿ ಅಧಿಕಾರಿಗಳ ತಂಡ ತನಿಖೆಯನ್ನು ಚುರುಕುಗೊಳಿಸಿದ್ದು, ಗುರುವಾರ ಅಂಚೆ ಕಚೇರಿ ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
-ಉದಯವಾಣಿ